ಉಡುಪಿ

ಅರಣ್ಯ ಇಲಾಖೆ ಸಿಬ್ಬಂದಿ ವಸತಿಗೃಹಕ್ಕೆ ಶಿಲಾನ್ಯಾಸ

Published On :

ಕಾಪು:  ಪರಿಸರಕ್ಕೆ ಮಾರಕವಾದ ಯಾವುದೇ ಯೋಜನೆಗಳಿಗೆ ಅವಿಭಜಿತ ಜಿಲ್ಲೆಗಳಲ್ಲಿ ಅವಕಾಶವಿಲ್ಲ. ಪರಿಸರವಿಲ್ಲದೆ ಮನುಷ್ಯ ಬದುಕುವುದು ಸಾಧ್ಯವಿಲ್ಲ, ಆದ್ದರಿಂದ ಪರಿಸರ ರಕ್ಷಣೆಗೆ ಆದ್ಯತೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಲಕ್ಷ ವೃಕ್ಷ ಆಂದೋಲನ ರೂಪಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಹೇಳಿದರು.
ಮಂಗಳವಾರ ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ವಸತಿಗೃಹ ಶಿಲಾನ್ಯಾಸ ನೆರವೇರಿಸಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದೇ ಸಂದರ್ಭ, ಪಡುಬಿದ್ರಿ ವಲಯದ ಅರಣ್ಯ ಸಿಬ್ಬಂದಿಗಾಗಿ ಸುಮಾರು ರು. 30 ಲಕ್ಷದಲ್ಲಿ ಮೂರು ಮನೆಗಳನ್ನು ನಿರ್ಮಿಸಲು ಶಿಲಾನ್ಯಾಸ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಇದ್ದರು.
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ಸಿಂಗ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ, ಜಿಲ್ಲಾ ಅರಣ್ಯಾ ಸಂರಕ್ಷಣಾಧಿಕಾರಿ ಪಿ. ಮಂಜುನಾಥ ಶೆಟ್ಟಿ, ಉಪವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.