ಉಡುಪಿ

ಗುಡ್ಡದಲ್ಲಿ ಕಟ್ಟಿದ ದನ ಕಳವು

Published On :

ಮಣಿಪಾಲ: ಇಲ್ಲಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟ ಎಂಬಲ್ಲಿ ಮೇಯಲು ಕಟ್ಟಿ ಹಾಕಿದ್ದ ದನವನ್ನು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದೆ. ಸೀತಾರಾಮ್ ಶೆಟ್ಟಿ ಎಂಬವರು ತಮ್ಮ ಮನೆ ಬಳಿ ಗುಡ್ಡದಲ್ಲಿ 2 ದನಗಳನ್ನು ಕಟ್ಟಿ ಹಾಕಿದ್ದರು. ಕಳವಾದ ದನಗಳ ಅಂದಾಜು ಮೌಲ್ಯ ರು. 25 ಸಾವಿರ  ಎಂಬುದಾಗಿ ಸೀತಾರಾಮ್ ಶೆಟ್ಟಿ ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25ರಂದು ಮುದ್ದುಕೃಷ್ಣ ಚಿತ್ರ ಬಿಡಿಸುವ ಸ್ಪರ್ಧೆ
ಉಡುಪಿ: ಆಮ್‌ಕೇರ್ ಹೆಲ್ತ್ ಸೆಂಟರ್ ಹಾಗೂ ಕಿದಿಯೂರು ಆರ್ಟ್ಸ್ ಸಹಯೋಗದಲ್ಲಿ ಆ.25ರಂದು ಬೆಳಗ್ಗೆ 11 ಗಂಟೆಗೆ ಶಾಲೆ ಮಕ್ಕಳಿಗಾಗಿ ಮುದ್ದು ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಉಡುಪಿಯ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿರುವ ಆಮ್‌ಕೇರ್ ಹೆಲ್ತ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ.
ಸ್ಪರ್ಧೆಯು 1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಹಾಗೂ 8ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 3 ವಿಭಾಗಗಳಲ್ಲಿ ನಡೆಯಲಿದೆ. ಪ್ರತಿ ವಿಭಾಗಕ್ಕೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ವಿತರಿಸಲಾಗುತ್ತದೆ. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಪೇಪರ್ ಮಾತ್ರ ನೀಡಲಾಗುವುದು. ಬೇಕಾಗುವ ಬಣ್ಣ- ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ- 9845016830 ಅಥವಾ 09591143962 ಸಂಪರ್ಕಿಸಬಹುದು ಎಂದು ಆಮ್‌ಕೇರ್ ನಿರ್ದೇಶಕ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.