ಮಣಿಪಾಲ್ ಯುವತಿಯ ಸಾಮೂಹಿಕ ಅತ್ಯಾಚಾರ: 500 ಪುಟಗಳ ಆರೋಪಪಟ್ಟಿ ಸಲ್ಲಿಕೆ
ಉಡುಪಿ: ಭಾರಿ ಚರ್ಚೆಗೆ ಕಾರಣವಾಗಿದ್ದ ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅಮಾನುಷ ಸಾಮೂಹಿಕ ಅತ್ಯಾಚಾರ ಪ್ರಕರಣದ ಚಾರ್ಜ್‌ಶೀಟ್ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.
ಸರ್ಕಾರಿ ವಿಧಿವಿಜ್ಞಾನ ಪ್ರಯೋಗಾಲಯದಿಂದ ಬುಧವಾರ ವೈಜ್ಞಾನಿಕ ಘಟನೆಗೆ ಸಂಬಂಧಿಸಿದ ವರದಿ ಬಂದಿದ್ದು, ಈ ವರದಿಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ ಮಣಿಪಾಲ ಠಾಣಾಧಿಕಾರಿ ಸದಾನಂದ ತಿಪ್ಪಣ್ಣನವರ್ ಸುಮಾರು 500 ಪುಟಗಳ ಆರೋಪಪಟ್ಟಿಯನ್ನು ಜಿಲ್ಲಾ ನ್ಯಾಯಾಲಯದ ಮುಖ್ಯ ನ್ಯಾಯಿಕ ದಂಡಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಬೋರಲಿಂಗಯ್ಯ ಎಂ.ಬಿ. ದೃಢಪಡಿಸಿದ್ದಾರೆ.
ಜೂನ್ 20ರಂದು ಮಧ್ಯಾರಾತ್ರಿ ಮಣಿಪಾಲ ವಿವಿಯ ಆವರಣದಿಂದ ವೈದ್ಯಕೀಯ ವಿದ್ಯಾರ್ಥಿಯೊಬ್ಬಳನ್ನು ಮೂರು ಮಂದಿ ಆಟೋದಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ನಂತರ ಜೂನ್ 27ರಂದು ಪೊಲೀಸರು ಆರೋಪಿಗಳಾದ ಯೋಗೀಶ್ ಪೂಜಾರಿ ಯಾನೆ ಆಮ್ಲೇಟ್ ಯೋಗೀಶ (30), ಹರಿಪ್ರಸಾದ್ ಪೂಜಾರಿ (27) ಮತ್ತು ಆನಂದ ಪಾಣಾರ (28) ಅವರನ್ನು ಬಂಧಿಸಿದ್ದರು. ಅಲ್ಲದೇ ಈ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಬಾಲಚಂದ್ರ ಮತ್ತು ಹರೀಂದ್ರ ಎಂಬವರನ್ನೂ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

