ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ
ಉಡುಪಿ: ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯಕ್ಕೆ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ಸಾಮಗ್ರಿ ವಿತರಿಸುವುದರ ವಿರುದ್ಧ ಜಿಲ್ಲಾ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟವು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಿತು.
ಕೊರಗ ಸಮುದಾಯಕ್ಕೆ ವಿತರಿಸುತ್ತಿರುವ ಹೆಸರು ಕಾಳಿನಲ್ಲಿ ಕಲ್ಲು ಮಿಶ್ರಿತವಾಗಿರುತ್ತದೆ. ಜೊತೆಗೆ ಬೆಲ್ಲ, ಮೊಟ್ಟೆ ಇವೆಲ್ಲವೂ ಕೂಡ ಕಳಪೆ ಮಟ್ಟದಾಗಿದೆ. ಕೊಡುವಂತ ಆಹಾರವು ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ, ಈ ಬಗ್ಗೆ ಐ.ಟಿ.ಡಿ.ಪಿ. ಇಲಾಖೆಗೆ ತಿಳಿಸಿದ್ದರೂ ಕೂಡ ಈ ವರ್ಷ ಕಳಪೆ ಗುಣಮಟ್ಟದ ಆಹಾರವನ್ನು ವಿತರಣೆ ಮಾಡಲಾಗಿದೆ. ಆದಷ್ಟೂ ಶೀಘ್ರವಾಗಿ ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಆಗ್ರಹಿಸಿದೆ.
ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರವನ್ನು ಪದೇ ಪದೇ ವಿತರಿಸುತ್ತಿರುವ ಟೆಂಡರನ್ನು ರದ್ದು ಮಾಡಿ ಹೊಸದಾಗಿ ಟೆಂಡರ್ ರಚನೆ, ತೂಕ ಮತ್ತು ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ ವಿತರಿಸುವುದರ ಜೊತೆಗೆ ಕೊಡಗಿನ ಮಾದರಿಯಲ್ಲಿ ಒಂದೇ ಪ್ಯಾಕ್ನಲ್ಲಿ ವಿತರಣೆ ಮಾಡುವುದು, ಪೌಷ್ಟಿಕ ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೌಷ್ಟಿಕ ಆಹಾರದ ಗುಣಮಟ್ಟ ಖಾತ್ರಿ ಸಮಿಯನ್ನು ರಚಿಸಲು ಮುಂದಾಬೇಕು ಎಂಬ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.
ಪ್ರತಿಭಟನೆಯಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕೋಶಾಧಿಕಾರಿ ವಿನಯ, ಶಶಿಕಲಾ ಸಚ್ಚರಿಪೇಟೆ, ಶಶಿಕಲಾ ಕೊರಗನಾಡ, ಕುಮಾರ ಕೊರಗ, ಗೌರಿ ಕೆಂಜೂರು ಪದ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

