ಅಡಕೆ- ತೆಂಗು ಬೆಳೆಯಲ್ಲಿ ತಂತ್ರಜ್ಞಾನ ಅಗತ್ಯ: ಪ್ರಮೋದ್ ಮಧ್ವರಾಜ್
ಬ್ರಹ್ಮಾವರ: ಅಡಕೆ ಮತು ತೆಂಗು ಕೃಷಿಯನ್ನು ಲಾಭದಾಯಕವಾಗಿಸಲು ಸರಿಯಾದ ತಂತ್ರಜ್ಞಾನಗಳ ಅಳವಡಿಕೆ ಅತ್ಯಗತ್ಯ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯವರು ಅಡಕೆ- ತೆಂಗು ಕೃಷಿ, ಅದರ ಮೌಲ್ಯವರ್ಧನೆಗಾಗಿ ಸಾಕಷ್ಟು ಹೊಸ ತಂತ್ರಜ್ಞಾನಗಳನ್ನು ಹೊರತಂದಿದ್ದು, ರೈತರು ಅವುಗಳನ್ನು ಬಳಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಕಾಸರಗೋಡು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ, ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ ಹಾಗೂ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಗಳ ಸಹಭಾಗಿತ್ವದಲ್ಲಿ ನಡೆದ 'ತೆಂಗು ಮತ್ತು ಅಡಕೆ ಬೆಳೆಗಳ ಬಗ್ಗೆ ವಿಜ್ಞಾನಿಗಳೊಂದಿಗೆ ರೈತರ ಸಂವಾದ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಣಿಪಾಲ ಬಿವಿಟಿ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಂ. ಉಡುಪ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಜಾರ್ಜ್ ವಿ. ಥೋಮಸ್ ಮತ್ತು ಸಮಾಜ ವಿಜ್ಞಾನ ವಿಭಾಗದ ಪ್ರಭಾರ ಮುಖ್ಯಸ್ಥ ಡಾ.ಸಿ. ತಂಬನ್, ಅಖಿಲ ಭಾರತ ಸಂಘಟಿತ ಪಾಮ್ ಬೆಳೆಗಳ ಸಂಶೋಧನಾ ಯೋಜನೆ ಸಂಯೋಜಕ ಡಾ.ಎಚ್.ಪಿ. ಮಹೇಶ್ವರಪ್ಪ, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಎಂ. ಹನುಮಂತಪ್ಪ ಸಂವಾದದಲ್ಲಿ ಭಾಗವಹಿಸಿದ್ದರು.
ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಕೆ.ಎಸ್. ಆನಂದ ಸ್ವಾಗತಿಸಿದರು. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಡಾ. ಜಯಲಕ್ಷ್ಮೀ ಎನ್. ಹೆಗಡೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

