ಬೆಲೆ ಏರಿಕೆ: ಕಾರ್ಕಳ ಯುವಮೋರ್ಚಾ ಖಂಡನೆ
ಕಾರ್ಕಳ: ಕೇಂದ್ರದಲ್ಲಿ ಯುಪಿಎ ಸರ್ಕಾರ ಆಡಳಿತಕ್ಕೆ ಬಂದ ನಂತರ ದಿನ ಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಡ ಜನರು ಜೀವನ ಸಾಗಿಸಲು ಕಷ್ಟ ಸಾಧ್ಯವಾಗಿದೆ ಎಂದು ಕಾರ್ಕಳ ಯುವಮೋರ್ಚಾ ಅಧ್ಯಕ್ಷ ಮಹಾವೀರ ಹೆಗ್ಡೆ ಆರೋಪಿಸಿದ್ದಾರೆ. ದೇಶದ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ನಿರಂತರ ದಾಳಿ ನಡೆಸುತ್ತಿದ್ದು, ಇದಕ್ಕೆ ಸರಿಯಾದ ಉತ್ತರ ನೀಡಲು ಆಗದಿರುವುದು ನಾಚಿಕೆಗೇಡಿನ ಸಂಗತಿ. ಸೈನಿಕರಿಗೆ ಪ್ರತಿದಾಳಿ ನಡೆಸಲು ಅವಕಾಶ ನೀಡಿದರೆ ಪಾಕಿಸ್ತಾನವನ್ನು ಹೊಡೆದುರುಳಿಸುವುದು ದೊಡ್ಡ ವಿಷಯವಲ್ಲ. ಆದರೆ ಯುಪಿಎ ಸರ್ಕಾರ ಪ್ರತಿ ದಾಳಿ ನಡೆಸಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಡುಪಿ ಹಾಗೂ ದ.ಕ. ಜಿಲ್ಲೆಗಳಲ್ಲಿ ಕಳ್ಳತನ ಹೆಚ್ಚಾಗಿದ್ದು, ಇನ್ನೂ 5 ವರ್ಷ ಅಧಿಕಾರ ಪೂರ್ಣಗೊಳಿಸಿದರೆ ರಾಜ್ಯದ ಜನರನ್ನು ರಕ್ಷಿಸುವವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ಕಾರ್ಯಾಲಯ ಸ್ಥಳಾಂತರ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿವಿಯ ಉಡುಪಿ ಪ್ರಾದೇಶಿಕ ಕೇಂದ್ರದ ಕಾರ್ಯಾಲಯವನ್ನು ಹಳೇ ಜಿಲ್ಲಾ ಪಂಚಾಯಿತಿ ಸರ್ಕಾರಿ ಕಟ್ಟಡ, 2ನೇ ಮಹಡಿ, ಬನ್ನಂಜೆ, ಉಡುಪಿ ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಕ.ರಾ.ಮು.ವಿ.ಯದ ವಿದ್ಯಾರ್ಥಿಗಳು, ಅಧ್ಯಯನ ಕೇಂದ್ರಗಳ ಸಿಬ್ಬಂದಿ ವರ್ಗ ಮತ್ತು ಉಡುಪಿ ಜಿಲ್ಲೆಯ ನಾಗರಿಕರು ಮೇಲ್ಕಂಡ ಹೊಸ ಕಚೇರಿಯ ವಿಳಾಸದಲ್ಲಿ ವ್ಯವಹರಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 0820 - 2522247 ಅಥವಾ 9972526647 ಇಲ್ಲಿಗೆ ಸಂಪರ್ಕಿಸಲು ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ. ಮಹಾಲಿಂಗಯ್ಯ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

