ಉಡುಪಿ

ಮಳೆಗಾಲ ಮುಗಿದ ಕೂಡಲೆ ಎಲ್ಲ ರಸ್ತೆಗಳ ಡಾಂಬರೀಕರಣ: ಶಾಸಕ ಸುನಿಲ್ ಕುಮಾರ್

Published On :

ಕಾರ್ಕಳ: ಈ ವರ್ಷ ವಿಪರೀತ ಮಳೆಯಿಂದಾಗಿ ಪಟ್ಟಣದ ಎಲ್ಲ ರಸ್ತೆಗಳು ತೀರ ಹದಗೆಟ್ಟಿದ್ದು, ಮಳೆಗಾಲ ಮುಗಿದ ತಕ್ಷಣ ಮುಖ್ಯರಸ್ತೆ ಸೇರಿದಂತೆ ಎಲ್ಲ ರಸ್ತೆಗಳ ಡಾಂಬರಿಕರಣ ಮಾಡಲಾಗುವುದು ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಜೋಡುರಸ್ತೆಯಿಂದ ಗ್ಯಾಲಕ್ಸಿ ಸಭಾಭವನವರೆಗಿನ ಉದ್ದೇಶಿತ ದ್ವಿಪಥ ರಸ್ತೆ ಯೋಜನೆ ಕುರಿತು ಸೋಮವಾರ ಬಂಡೀಮಠದ ಬಳಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಈಗಾಗಲೇ ನಗರೋತ್ಥಾನ 2ನೇ ಹಂತದಲ್ಲಿ ಜೋಡುರಸ್ತೆಯಿಂದ ಗ್ಯಾಲಕ್ಸಿತನಕ ದ್ವಿಪಥ ರಸ್ತೆ ಹಾಗೂ ಕಲ್ಲೊಟ್ಟೆ ಪೆರ್ವಾಜೆ ರಸ್ತೆಗೆ ಮರುಡಾಂಬರಿಕರಣಕ್ಕೆ ಅನುದಾನ ಬಿಡುಗಡೆಗೊಂಡಿದ್ದು, ಮಳೆ ನಿಂತ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಶೀಘ್ರ ರಸ್ತೆ ಅಗಲೀಕರಣ: ನಗರ ರಸ್ತೆ ಅಗಲೀಕರಣ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಅಂಗಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿ ಎರಡು ವಾರಗಳ ಒಳಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪುರಸಭಾ ಸದಸ್ಯರಾದ ಗಿರಿಧರ ನಾಯಕ್, ಪ್ರಕಾಶ್ ರಾವ್, ಸುನಿಲ್ ಕೋಟ್ಯಾನ್, ಅನಿತಾ ಅಂಚನ್, ಮಾಯಾ, ಶ್ರೀಧರ ದೇವಾಡಿಗ, ಯೊಗೀಶ ದೇವಾಡಿಗ, ಬಿಜೆಪಿ ಅಧ್ಯಕ್ಷರಾದ ಮಣಿರಾಜ್ ಶೆಟ್ಟಿ, ಅಂತೋಣಿ ಡಿಸೋಜ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.