'ಇ- ಆಡಳಿತ ಇಂದಿನ ಅನಿವಾರ್ಯತೆ'
ಉಡುಪಿ: ಇ- ಆಡಳಿತ ಇಂದಿನ ಆಧುನಿಕತೆಯ ಅನಿವಾರ್ಯತೆಯಾಗಿದೆ. ಇ- ತಂತ್ರಜ್ಞಾನವು ಆಡಳಿತ ವ್ಯವಸ್ಥೆಗೆ ಒಂದು ಹೊಸ ಆಯಾಮವನ್ನು ಒದಗಿಸಲಾರಂಭಿಸಿದೆ. ಹೀಗಿದ್ದರೂ ಆಡಳಿತದಲ್ಲಿ ಇ- ತಂತ್ರಜ್ಞಾನವು ಇನ್ನೂ ಅನೇಕ ಬೆಳವಣಿಗೆಗಳನ್ನು ಕಂಡುಕೊಳ್ಳುವ ಅವಶ್ಯಕತೆ ಇದೆ. ತಂತ್ರಜ್ಞಾನದ ಮೂಲಕ ಆಡಳಿತ ವ್ಯವಸ್ಥೆ ಜನರಿಗೆ ಇನ್ನಷ್ಟು ಹತ್ತಿರವಾಗಬೇಕಾಗಿದೆ ಎಂದು ಮಣಿಪಾಲದ ಟ್ಯಾಪ್ಮಿಯ ನಿರ್ದೇಶಕ ಡಾ. ಚೌಧರಿ ಪ್ರಸಾದ್ ಅಭಿಪ್ರಾಯಪಟ್ಟರು.
ಅವರು ಶಿರ್ವ ಸಂತ ಮೇರಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ರಾಜ್ಯಶಾಸ್ತ್ರ ಪ್ರಾಧ್ಯಾಪಕರ ಸಂಘ ಆಶ್ರಯದಲ್ಲಿ ನಡೆದ ಕರ್ನಾಟಕದಲ್ಲಿ ಇ- ಆಡಳಿತ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಡಾ. ಪದ್ಮನಾಭ ಭಟ್ ಅವರು ಸಂಪಾದಿಸಿದ 'ಭಾರತದಲ್ಲಿ ಪ್ರಜಾಪ್ರಭುತ್ವ ಅವಕಾಶಗಳ ಕ್ರೋಢೀಕರಣ' ಎನ್ನುವ ಕೃತಿಯನ್ನು ಡಾ. ಚೌಧರಿ ಪ್ರಸಾದ್ ಬಿಡುಗಡೆಗೊಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಎನ್. ರಾಜನ್ ವಹಿಸಿದ್ದರು. ಪ್ರೊ. ರೊನಾಲ್ಡ್ ಜೆ. ಮೊರಾಸ್ ಅತಿಥಿಗಳನ್ನು ಸ್ವಾಗತಿಸಿದರು. ಮಂಗಳೂರು ವಿವಿಯ ರಾಜ್ಯಶಾಸ್ತ್ರ ಸಂಘದ ಅಧ್ಯಕ್ಷ ಡಾ. ಪದ್ಮನಾಭ ಭಟ್ ವಂದಿಸಿದರು. ರಾಜ್ಯಶಾಸ್ತ್ರ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಾನಂದ ಶಣೈ ಇದ್ದರು. ಪ್ರೊ. ಸುಬ್ರಹ್ಮಣ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

