ಉಪಾಧ್ಯಾಯ ಮೂಡುಬೆಳ್ಳೆ ಅತ್ಯುತ್ತಮ ಶಿಕ್ಷಕ
ಉಡುಪಿ: ಚಿತ್ರಕಲಾ ಶಿಕ್ಷಕ, ಕಲಾ ವಿಮರ್ಶಕ ಉಡುಪಿಯ ಉಪಾಧ್ಯಾಯ ಮೂಡುಬೆಳ್ಳೆ ಅವರನ್ನು ಈ ಬಾರಿಯ ಅತ್ಯುತ್ತಮ ಶಿಕ್ಷಕ ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ.5ರಂದು ಶಿಕ್ಷಕ ದಿನಾಚರಣೆ ಪ್ರಯುಕ್ತ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಚಿತ್ರಕಲಾ ಶಿಕ್ಷಕರಿಗೆ ಜಿಲ್ಲಾಮಟ್ಟದ, ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಳು ಸಿಗುವುದೇ ದುಸ್ತರವಾಗಿರುವ ಸಂದರ್ಭದಲ್ಲಿ ಉಪಾಧ್ಯಾಯರ ಮೂಲಕ ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿತ್ರಕಲಾ ಶಿಕ್ಷಕರೊಬ್ಬರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆಯುತ್ತಿದೆ.
ಉಪಾಧ್ಯಾಯರು ಪ್ರಸ್ತುತ ಉಡುಪಿಯ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮೂಡುಬೆಳ್ಳೆಯ ಚರ್ಚ್ ಶಾಲೆ, ಸಂತ ಲಾರೆನ್ಸ್ ಕಾಲೇಜು ಹಾಗೂ ಉಡುಪಿಯ ಚಿತ್ರಕಲಾ ಮಂದಿರ ಕಲಾಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಚಿತ್ರಕಲೆಯಲ್ಲಿ ಎರಡು ಪದವಿಗಳನ್ನು ಪಡೆದಿದ್ದಾರೆ.
ಸಂಪನ್ಮೂಲ ವ್ಯಕ್ತಿ: ಉಪಾಧ್ಯಾಯರು ಶಿಕ್ಷಣ ಸಂಪನ್ಮೂಲ ವ್ಯಕ್ತಿಯೂ ಆಗಿದ್ದು, ಪತ್ರಿಕೆಗಳಲ್ಲಿ ಚಿತ್ರಕಲಾ ವಿಮರ್ಶೆಯ ಮೂಲಕ ಪ್ರಸಿದ್ಧರಾಗಿದ್ದಾರೆ. ಅವರ ರಂಗೋಲಿ ಕಲಾವಿದರೂ ಹೌದು. ಶಾಲೆಯಲ್ಲಿ ಚಿತ್ರಕಲಾಸಂಘದ ಮೂಲಕ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಕಲಾ ಪ್ರದರ್ಶನವನ್ನು ಕಳೆದ ಇಪ್ಪತೈದು ವರ್ಷಗಳಿಂದ ನಿರಂತರ ನಡೆಸುತ್ತಿದ್ದಾರೆ. ಅವರಿಂದ ತರಬೇತಿ ಪಡೆದ ಶಾಲಾ ಮಕ್ಕಳು ರಾಜ್ಯಮಟ್ಟದ ಇಂಟೆಲ್ ತಂತ್ರಜ್ಞಾನ ಸ್ಫರ್ಧೆಯಲ್ಲಿ ಪ್ರಶಸ್ತಿ ಗಳಿಸಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯನಾಗಿಯೂ ಕಲಾಸೇವೆ ಮಾಡಿದ್ದಾರೆ. ಈಗಾಗಲೇ ಅತ್ಯುತ್ತಮ ಶಿಕ್ಷಕ ರಾಜ್ಯಪ್ರಶಸ್ತಿ, ಅತ್ಯುತ್ತಮ ತಂತ್ರಜ್ಞಾನ ಶಿಕ್ಷಕ ರಾಜ್ಯ ಪ್ರಶಸ್ತಿ, ಪ್ರಿಯದರ್ಶಿನಿ ಇಂದಿರಾ ಗಾಂಧಿ ರಾಜ್ಯ ಪ್ರಶಸ್ತಿ, ಕನ್ನಡ ಸಾಹಿತ್ಯ ಸಮ್ಮೇಳನ ರಾಜ್ಯ ಪ್ರಶಸ್ತಿಗಳೊಂದಿಗೆ ಅನೇಕ ಸನ್ಮಾನಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

