ಬೆಳೆ ನಷ್ಟ ಪರಿಹಾರಕ್ಕೆ 25 ಕೋಟಿ ಬಿಡುಗಡೆ: ಸೊರಕೆ
ಮಣಿಪಾಲ: ಉಡುಪಿ ಸೇರಿದಂತೆ ಅಡಕೆ ಕೊಳೆ ರೋಗಕ್ಕೆ ತುತ್ತಾದ ರಾಜ್ಯದ ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರಕ್ಕಾಗಿ 25 ಕೋಟಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಣಯಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 100 ದಿನಗಳ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿ, ಈ 100 ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿನ ಸರ್ಕಾರದ ಸಾಧನೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1,13,311 ಮಂದಿ ಬಿಪಿಎಲ್ ಪಡಿತರ ಕಾರ್ಡ್ದಾರರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಾರೆ. 1,62,149 ಅಂಗನವಾಡಿ, ಶಾಲಾ ಮಕ್ಕಳು ಕ್ಷೀರಭಾಗ್ಯ ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ. ಹಾಲು ಅಥವಾ ಅಕ್ಕಿ ವಿತರಣೆಯಲ್ಲಾಗಲೀ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದ ಅವರು, ಮುಂದಿನ ದಿನಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ ಕುಚ್ಚಲಕ್ಕಿಯೂ ವಿತರಣೆಯಾಗಲಿದೆ ಎಂದು ತಿಳಿಸಿದರು.
2013- 14ನೇ ಸಾಲಿಗೆ ರಾಜ್ಯ ಹಣಕಾಸು ಆಯೋಗ (ಎಸ್ಎಫ್ಸಿ) ಅನುದಾನದಲ್ಲಿ 19.03 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ. ಈ ಸಾಲಿನ ಪ್ರಾಕೃತಿಕ ವಿಕೋಪ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಗೆ 1.40 ಕೋಟಿ ಹಾಗೂ ಕಡಲು ಕೊರೆತ ಹಾನಿ ಪರಿಹಾರಕ್ಕಾಗಿ 1.50 ಕೋಟಿ ಅನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ ಎಂದವರು ಹೇಳಿದರು.
ಕೊರಗ ಸಮುದಾಯ ಅಭಿವೃದ್ಧಿಗಾಗಿ 1.07 ಕೋಟಿ ವಿನಿಯೋಗಿಸಲಾಗಿದೆ. ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಪ.ಜಾತಿ ಮತ್ತು ಪಂಗಡದವರಿಗೆ ನೀಡಲಾದ 2.84 ಕೋಟಿ ಸಾಲ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ನೀಡಲಾಗಿರುವ 4.86 ಕೋಟಿ ಸಾಲ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾದ 3.59 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ 187 ಮಂದಿ ವೃದ್ಧಾಪ್ಯ, 297 ಮಂದಿ ಅಂಗವಿಕಲ, 851 ಮಂದಿ ವಿಧವಾ ವೇತನ ಪಡೆಯುತ್ತಿದ್ದು, 1998 ಮಂದಿಗೆ ಸಂಧ್ಯಾ ಸರಕ್ಷಾ ಯೋಜನೆಯಡಿ ಸೌಲಭ್ಯ ನೀಡಲಾಗಿದೆ. ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 2920 ಫಲಾನುಭವಿಗಳಿಗೆ, ಇಂದಿರಾ ಅವಾಸ್ ಯೋಜನೆಯಡಿ 1368 ಮಂದಿಗೆ ವಸತಿ ಮಂಜೂರಾತಿ ನೀಡಲಾಗಿದೆ ಎಂದರು.
ಶಾಸಕ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು, ಎಸ್ಪಿ ಡಾ. ಬೋರಲಿಂಗಯ್ಯ ಎಂ.ಬಿ, ಅಪರ ಜಿಲ್ಲಾಧಿಕಾರಿ ಕುಮಾರ್, ವಾರ್ತಾಧಿಕಾರಿ ಖಾದರ್ ಷಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

