ಉಡುಪಿ

ಮಣಿಪಾಲ್ ರೇಪ್ ಕೇಸ್: ಸೆಷನ್ಸ್ ಕೋರ್ಟ್‌ಗೆ ವರ್ಗ

Published On :

ಉಡುಪಿ: ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಉಡುಪಿ ಜಿಲ್ಲಾ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ (ಸಿಜೆಎಂಸಿ)ದಿಂದ ಜಿಲ್ಲಾ ಸತ್ರ ನ್ಯಾಯಾಲಯ (ಸೆಷನ್ಸ್ ಕೋರ್ಟ್)ಕ್ಕೆ ಶುಕ್ರವಾರ ವರ್ಗಾವಣೆಗೊಂಡಿದೆ. ಈ ಪ್ರಕರಣದ ಮೂವರು ಆರೋಪಿಗಳಾದ ಯೋಗೀಶ್ ಪೂಜಾರಿ ಯಾನೆ ಆಮ್ಲೇಟ್ ಯೋಗೀಶ್, ಹರಿಪ್ರಸಾದ್ ಪೂಜಾರಿ ಮತ್ತು ಆನಂದ ಪಾಣಾರ ಹಾಗೂ ಈ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿ ಸಾಕ್ಷ್ಯನಾಶಗೊಳಿಸಿದ ಆರೋಪಿಗಳಾದ ಬಾಲಚಂದ್ರ ಪೂಜಾರಿ ಮತ್ತು ಹರೀಂದ್ರ ಪೂಜಾರಿ ಅವರನ್ನು ಶುಕ್ರವಾರ ಸಿಜೆಎಂಸಿಗೆ ಹಾಜರುಪಡಿಸಲಾಯಿತು. ಇದುವರೆಗೆ ಆರೋಪಿಗಳಿಗೆ ತನಿಖೆಗಾಗಿ 1 ಬಾರಿ ಪೊಲೀಸ್ ಕಸ್ಟಡಿಗೆ ಮತ್ತು ದೋಷಾರೋಪಣ ಪಟ್ಟಿ ಸಲ್ಲಿಕೆ ವಿಳಂಬವಾದ ಹಿನ್ನೆಲೆಯಲ್ಲಿ 5 ಬಾರಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಈ ಪ್ರಕರಣವೂ ಸತ್ರ ನ್ಯಾಯಾಲಯದ ವ್ಯಾಪ್ತಿಗೆ ಬರುವುದರಿಂದ, ಮುಂದಿನ ವಿಚಾರಣೆಗೆ ಪ್ರಕರಣವನ್ನು ಸತ್ರ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಶುಕ್ರವಾರ ಸಿಜೆಎಂಸಿ ನ್ಯಾಯಾಧೀಶ ಚಂದ್ರಶೇಖರ್ ಅವರು ಪ್ರಕರಣವನ್ನು ಸತ್ರ ನ್ಯಾಯಾಲಯಕ್ಕೆ ವಹಿಸಿದರು. ಸತ್ರ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಪಡೆದುಕೊಂಡು ಮುಂದಿನ ವಿಚಾರಣೆಯ ದಿನಾಂಕವನ್ನು ಇನ್ನೆರಡು ದಿನಗಳೊಳಗಾಗಿ ಪ್ರಕಟಿಸಲಿದೆ. ಆ ದಿನಾಂಕದವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿಯಲಿದೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಬನ್ನಾಡಿ ರಾಜು ಪೂಜಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.