ಉಡುಪಿ

ಸುದ್ದಿ ಸಂಕ್ಷೇಪ

Published On :

ಉಚ್ಚಿಲ: ಪರಿಯಾಳ ಸಮಾಜ ಸುಧಾರಕ ಸಂಘ ವಾರ್ಷಿಕ ಸಭೆ
ಉಚ್ಟಿಲ: ಇಲ್ಲಿನ ಪರಿಯಾಳ ಸಮಾಜ ಸುಧಾರಕ ಸಂಘದ ವಾರ್ಷಿಕ ಮಹಾಸಭೆ ಉಚ್ಚಿಲದ ಜಿಲ್ಲಾ ಸಂಘದ ಸ್ವಸಮಾಜ ಮಂದಿರದಲ್ಲಿ ಸಂಘದ ಅಧ್ಯಕ್ಷ ಯು. ಶಂಕರ್ ಸಾಲಿಯಾನ್ ಕಟಪಾಡಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಜರುಗಿತು. ದ.ಕ. ಜಿಲ್ಲಾ ಪರಿಯಾಳ ಸಂಘದ ಅಧ್ಯಕ್ಷ ಸಂಜೀವ ಬಂಗೇರ ಮಾರ್ನಮಿಕಟ್ಟೆ, ಮಂಗಳೂರು ಪರಿಯಾಳ ಮಹಿಳಾ ಮಂಡಲದ ಅಧ್ಯಕ್ಷೆ ಶರ್ಮಿಳಾ ರಾಮಚಂದ್ರ, ಕುಂದಾಪುರ ತಾಲೂಕು ಪರಿಯಾಳ ಸಂಘದ ಅಧ್ಯಕ್ಷ ಸುಜಯ ಸುವರ್ಣ ವಕ್ವಾಡಿ, ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಜಿ.ಪಂ. ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಇದ್ದರು. ಈ ಸಂದರ್ಭ, 5ನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುವ ಸಮಾಜದ ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಶಾಂತ್ ಸಾಲಿಯಾನ್ ಹಾಗೂ ಸತ್ಯವತಿ ಮಜೂರು ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಸಾಲಿಯಾನ್ ವಂದಿಸಿದರು.

6ರಂದು ಗಂಗೊಳ್ಳಿ ಜಮಾಬಂದಿ
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯಿತಿನ 2012- 13ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ 6ರಂದು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ. ಕುಂದಾಪುರ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರವಿ ಎಂ. ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ತೆಂಕನಿಡಿಯೂರು ಕಾಲೇಜಲ್ಲಿ ಸದ್ಭಾವನಾ ದಿನಾಚರಣೆ
ಉಡುಪಿ: ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಸದ್ಭಾವನಾ ದಿನಾಚರಣೆ ಮತ್ತು ಕೋಮು ಸೌಹಾರ್ದ ಸಪ್ತಾಹದ ಅಂಗವಾಗಿ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ಜರಗಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಜಿ. ಯೋಗಾನಂದ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಂ.ಜಿ.ಎಂ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಚಿನ್ನಸ್ವಾಮಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾಯ ಯೋಜನೆಯ ಅಧಿಕಾರಿ ಬಸವರಾಜು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಸಂಖ್ಯಾಶಾಸ್ತ್ರದ ಪ್ರಾಧ್ಯಾಪಕ ಉಮೇಶ ಪೈ ನಿರೂಪಿಸಿ ಯುವರೆಡ್‌ಕ್ರಾಸ್ ಘಟಕದ ಸಂಚಾಲಕಿ ಸುಜಾತ ವಿ. ಶೇಟ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.