ಉಡುಪಿ

ಉಪ್ಪೂರು: ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೀಪೋತ್ಸವ

Published On :

ಬ್ರಹ್ಮಾವರ: ಧಾರ್ಮಿಕ ಕೇಂದ್ರಗಳ ಮೂಲಕ ನಮ್ಮ ಪುರಾತನ ಸಂಪ್ರದಾಯ, ಆಚಾರ, ವಿಚಾರಗಳು ಇನ್ನೂ ಉಳಿದಿವೆ. ಇಂದಿನ ಒತ್ತಡದ ಜೀವನದಲ್ಲಿ ಮನಸ್ಸಿಗೆ ನೆಮ್ಮದಿ ನೀಡುವ ಕಾರ್ಯವನ್ನು ದೇವಸ್ಥಾನಗಳು ಮಾಡುತ್ತಿವೆ ಎಂದು ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಉಪ್ಪೂರು ಮಹತೋಭಾರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶನಿವಾರ ದೀಪೋತ್ಸವ ಹಾಗೂ ರಥೋತ್ಸವ ಸಂದರ್ಭ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಸಕ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪ್ರಶಸ್ತಿ ವಿಜೇತ ಬ್ರಹ್ಮಾವರ ಪೊಲೀಸ್ ಠಾಣೆಯ ಶೀನ ಬಿಲ್ಲವ ಮತ್ತು ರಾಜ್ಯಪ್ರಶಸ್ತಿ ವಿಜೇತ ಉಪ್ಪೂರು ಪ್ರೌಢಶಾಲೆಯ ಶಿಕ್ಷಕ ಪುತ್ತು ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಇದಕ್ಕೂ ಮುನ್ನ ಉಡುಪಿ ಪೇಜಾವರ ಮಠದ ಕಿರಿಯ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಹರಿದಾಸ ಬಿ.ಸಿ. ರಾವ್ ಶಿವಪುರ, ಉಪ್ಪೂರು ಗ್ರಾಪಂ ಅಧ್ಯಕ್ಷ ಸುನಿಲ್ ಶೆಟ್ಟಿ, ದೇವಸ್ಥಾನದ ಆಡಳಿತ ಮೊಕ್ತೇಸರ ಯು. ಪರಮೇಶ್ವರ ಮಧ್ಯಸ್ಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.