ಹೊಲಿಗೆ ತರಬೇತಿ ಉದ್ಘಾಟನೆ
ಮಣಿಪಾಲ: ರೋಟರಿ ಕ್ಲಬ್ ಉಡುಪಿ- ಮಣಿಪಾಲ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮಹಿಳೆಯರಿಗೆ 3 ವಾರಗಳ ಉಚಿತ ಹೊಲಿಗೆ ತರಬೇತಿಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಜರಗಿತು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮಣಿಪಾಲ ರೋಟರಿ ಅಧ್ಯಕ್ಷೆ ಡಾ.ಎ. ಗಿರಿಜಾ ಅವರು ಗ್ರಾಮೀಣ ಮಹಿಳೆಯರು ಇಂದಿನ ದಿನದಲ್ಲಿ ಧೈರ್ಯಗುಂದಬೇಕಾಗಿಲ್ಲ ಎಂದು ಹೇಳಿದರು.
ಹೊಲಿಗೆ ಕ್ಷೇತ್ರದಲ್ಲಿ ಪ್ರಾವೀಣ್ಯ ಹೊಂದಿದ ಮಹಿಳೆಯರಿಗೆ ಬೇಡಿಕೆ ಇದೆ. 21 ದಿನಗಳ ತರಬೇತಿಯಲ್ಲಿ ಗೈರು ಹಾಜರಾಗದೆ ದಿನವೂ ಭಾಗವಹಿಸಿ ಹೊಲಿಗೆ ಕೌಶಲ್ಯ ವೃದ್ಧಿಪಡಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟ್ನ ಆಡಳಿತ ಟ್ರಸ್ಟಿ ಕೆ.ಎಂ. ಉಡುಪ ಅಧ್ಯಕ್ಷತೆ ವಹಿಸಿದ್ದರು. ಡಾ. ಕೃಷ್ಣ ರಾವ್, ಎಚ್.ಎನ್.ಎಸ್. ರಾವ್, ಮಹೇಶ್ ಕುಮಾರ್, ಬಿವಿಟಿಯ ಲಕ್ಷ್ಮೀ ಬಾಯಿ, ಐ.ಜಿ. ಕಿಣಿ ಹಾಗೂ ರೋಟರಿ ಪದಾಧಿಕಾರಿಗಳು ಇದ್ದರು.
ಗೌರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೇಣು ಜಯರಾಮ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

