ಉಡುಪಿ

ಮಾನಸಿಕ ಕಾಯಿಲೆಗೆ ದೇವರ ಧ್ಯಾನವೇ ಔಷಧಿ: ಅದಮಾರು ಶ್ರೀ

Published On :

ಬ್ರಹ್ಮಾವರ: ಜಂಜಾಟಗಳಿಂದಾಗಿ ಜನರ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿದೆ. ಅನೇಕರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಲೆಗೆ ಒಳ್ಳೆಯ ಔಷಧಿ ಎಂದರೆ ದೇವರ ಧ್ಯಾನ ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದ್ದಾರೆ. ಇತ್ತೀಚೆಗೆ ಇಲ್ಲಿನ ಕುಂಜಾಲು ರಾಮಮಂದಿರದಲ್ಲಿ ಹನುಮ ಲಕ್ಷ್ಮಣ ಸಹಿತ ಸೀತಾರಾಮಚಂದ್ರ ದೇವರಿಗೆ ಲಕ್ಷ ತುಳಸಿ ಅರ್ಚನೆ, ರಜತ ಕಿರೀಟ ಸಮರ್ಪಣೆ, ಕವಾಟೋದ್ಘಾಟನೆ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ದುಗ್ಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಪ್ರಮೋದ್ ಮಧ್ವರಾಜ್, ಉದ್ಯಮಿ ನಾಗರಾಜ ಶೆಟ್ಟಿ, ಜಿಪಂ ಸದಸ್ಯೆ ಮಲ್ಲಿಕಾ ಬಿ. ಪೂಜಾರಿ, ತಾಪಂ ಸದಸ್ಯ ಉಮೇಶ್ ನಾಯ್ಕ, ಕುಂಜಾಲು ಗ್ರಾಪಂ ಅಧ್ಯಕ್ಷೆ ಶಕುಂತಳಾ ನಾಯಕ್, ಭಜನಾ ಮಂಡಳಿಗಳ ಸಂಘದ ಅಧ್ಯಕ್ಷ ಮಾಧವ ಸುವರ್ಣ ಇದ್ದರು. ದಾನಿಗಳಾದ ಎಚ್. ಗುಂಡು ಶೆಟ್ಟಿ ಹೆರಂಜೆ ಮತ್ತು ಆರೂರು ರತ್ನಾಕರ ಭಟ್ ದಂಪತಿಗಳನ್ನು ಸನ್ಮಾನಿಸಲಾಯಿತು. ರಾಮ ಮಂದಿರದ ಕೋಶಾಧಿಕಾರಿ ರಮಾನಂದ ರಾವ್ ಸ್ವಾಗತಿಸಿ, ನಿರೂಪಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ವಲಯ ಮೇಲ್ವಿಚಾರಕಿ ಭಾರತಿ ಶೆಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.