ಉಡುಪಿ

ನಾಳೆ ಅಹಿನಿರ್ವಾಣ ರಾಷ್ಟ್ರೀಯ ಸಮ್ಮೇಳನ

Published On :

ಉಡುಪಿ: ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10ರಂದು ಬೆಳಗ್ಗೆ 9 ಗಂಟೆಗೆ ಅಗದತಂತ್ರ ಹಾಗೂ ವ್ಯವಹಾರ ಆಯುರ್ವೇದ ವಿಷಯಕ್ಕೆ ಸಂಬಂಧಿಸಿ ಅಹಿನಿರ್ವಾಣ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್‌ಡಿಎಂ ಕಾಲೇಜು ಮತ್ತು ಆಸ್ಪತ್ರೆಯ ಸಂಘಟನಾ ಕಾರ್ಯದರ್ಶಿ ಡಾ. ವೀರಕುಮಾರ್ ಕೆ. ತಿಳಿಸಿದ್ದಾರೆ.
 ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಜಿರೆಯ ಎಸ್.ಡಿ.ಎಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಪ್ರೊ.ಬಿ. ಯಶೋವರ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಮುರುಳೀಧರ ಎ. ಮಾಡಲಿದ್ದಾರೆ ಎಂದರು.
 ಉಡುಪಿ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಯು.ಎನ್. ಪ್ರಸಾದ್ 'ಅಗದತಂತ್ರ ಹಾಗೂ ವ್ಯವಹಾರ ಆಯುರ್ವೇದ' ಎಂಬ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ. ಸಮ್ಮೇಳದಲ್ಲಿ ಸುಮಾರು 79 ವೈಜ್ಞಾನಿಕ ಪ್ರಬಂಧಗಳು ಮಂಡನೆಯಾಗಲಿದ್ದು, 650 ಆಯುರ್ವೇದ ವೈದ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿರುವರು ಎಂದು ತಿಳಿಸಿದರು.
 ಸುದ್ದಿಗೋಷ್ಠಿಯಲ್ಲಿ ದ್ರವ್ಯ ವಿಭಾಗದ ಸಹಪ್ರಾಧ್ಯಾಪಕ ಡಾ. ಮಹಮ್ಮದ್ ಫೈಸಲ್, ಅಗದತಂತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಶೋಭಾ, ಡಾ.ಜಿ.ಎಂ. ಕಂಠಿ, ವಿಜೇಂದ್ರ ಭಟ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.