ಮತಾಂತರಕ್ಕೆ ಯತ್ನ; ಮಹಿಳೆಯರಿಬ್ಬರು ಪೊಲೀಸ್ ವಶಕ್ಕೆ
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿನ ನಿವಾಸಿ ಅಮರವಾಣಿ ನಾಗೇಶ್ ಸುವರ್ಣ ಎಂಬವರ ಮನೆಗೆ ಇಬ್ಬರು ಮಹಿಳೆಯರು ಕ್ರೈಸ್ತ ಮತಕ್ಕೆ ಮತಾಂತರ ನಡೆಸುವ ಪ್ರಯತ್ನದಲ್ಲಿರುವುದನ್ನು ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಡ ಹಿಂದೂ ಧರ್ಮದವರ ಮನೆಗಳನ್ನು ಹುಡುಕಿ ಹೋಗುತ್ತಿರುವ ಈ ಇಬ್ಬರು ಮಹಿಳೆಯರನ್ನು ಗಮನಿಸಿದ ಅಮರವಾಣಿ ನಾಗೇಶ್ ಸುವರ್ಣ, ಬಜರಂಗದಳ ಹಾಗೂ ಇತರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಸಂಪರ್ಕಿಸಿದರು. ಸ್ಥಳಕ್ಕಾಮಿಸಿದ ಕಾರ್ಯಕರ್ತರು ಮತಾಂತರಕ್ಕೆ ಪ್ರಯತ್ನಿಸಿದ ಮಹಿಳೆಯರನ್ನು ಗ್ರಾಮಾಂತರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

