ಉಡುಪಿ

ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ

Published On :

ಕುಂದಾಪುರ: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಮಂಗಳವಾರ ತಲ್ಲೂರು ಗ್ರಾಮದ ಪ್ರವಾಸಿ ಬಾರ್ ಸಮೀಪ ನಡೆದಿದೆ. ಗಾಯಗೊಂಡವರನ್ನು ಚಮ್ಮು ಎಂದು ಗುರುತಿಸಲಾಗಿದೆ. ಆರೋಪಿ ಪ್ರಭಾಕರ ಪೂಜಾರಿ ತಮ್ಮ ಬೈಕನ್ನು ಅತಿ ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೀವ ಬೆದರಿಕೆ: ದೂರು
ಕುಂದಾಪುರ: ಹಣದ ವಿಷಯವಾಗಿ ಮಹಿಳೆಗೆ ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ನಂದಿಕೇಶ್ವರ ದೇವಸ್ಥಾನ ಹತ್ತಿರ ಅಸೋಡು ಎಂಬಲ್ಲಿ ಮಂಗಳವಾರ ನಡೆದಿದೆ. ಗೀತಾ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ ನಟರಾಜ್ ಹಾಗೂ ಆತನ ಗೆಳೆಯರು, ಗೀತಾ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಅವರ ಪತಿ ರಾಘವೇಂದ್ರ ಅವರಿಂದ ಹಣ ತೆಗೆಸಿಕೊಡದಿದ್ದರೆ ಕೊಲ್ಲದೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಗೀತಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಚೇರ್ಕಾಡಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತರು ಸೋಮ ನಾಯ್ಕ. ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಬಿ.ಟಿ. ನಾಯ್ಕ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್-ಸೈಕಲ್ ಡಿಕ್ಕಿ: ಸವಾರಗೆ ಗಾಯ
ಮಲ್ಪೆ: ಸೈಕಲ್- ಬೈಕ್ ಡಿಕ್ಕಿಯಾಗಿ ಸೈಕಲ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಬಸ್ ನಿಲ್ದಾಣ ಬಳಿ ಮಂಗಳವಾರ ನಡೆದಿದೆ. ಗಾಯಗೊಂಡವರನ್ನು ಶೇರ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಅವರು ಕಲ್ಮಾಡಿ ಕಡೆಯಿಂದ ಮಲ್ಪೆ ಟೆಬ್ಮಾ ಶಿಪ್ ಯಾರ್ಡ್‌ಗೆ ಕೆಲಸಕ್ಕೆ ಹೋಗಲು ಸೈಕಲ್‌ನಲ್ಲಿ ಬರುತ್ತಿದ್ದಾಗ ಆರೋಪಿ ರಿಯಾಜ್ ಬೈಕನ್ನು ವೇಗವಾಗಿ ಚಲಾಯಿಸಿಕೊಂಡು ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್-ಲಾಕಿ ಡಿಕ್ಕಿ: ಸವಾರಗೆ ಗಾಯ
ಹಿರಿಯಡ್ಕ: ಬೈಕ್- ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಆತ್ರಾಡಿ ಗ್ರಾಮದ ಕೆಳ ಅತ್ರಾಡಿ ಗದ್ದಿಗೆ ಬಳಿ ಮಂಗಳವಾರ ನಡೆದಿದೆ. ಗಾಯಗೊಂಡವರನ್ನು ವಿಷ್ಣುಮೂರ್ತಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಣಿಪಾಲ ಕಡೆಯಿಂದ ಹಿರಿಯಡ್ಕ ಕಡೆಗೆ ಲಾರಿಯನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ವಿಷ್ಣುಮೂರ್ತಿ ಚಲಾಯಿಸಿಕೊಂಡು ಬುರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.