ಉಡುಪಿ

ಸಾಣೂರಿನಲ್ಲಿ 'ಜನರ ಬಳಿ ಶಾಸಕರು'

Published On :

ಕಾರ್ಕಳ: ಶಾಸಕರ ವಿಶೇಷ ಕಾರ್ಯಕ್ರಮ 'ಜನರ ಬಳಿ ಶಾಸಕರು' ಇತ್ತೀಚೆಗೆ ಸಾಣೂರು ಗ್ರಾಮ ಪಂಚಾಯಿತಿ ಸುವರ್ಣ ಸೌಧದಲ್ಲಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ ಎಸ್. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಬಿಪಿಎಲ್ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಿದ ಶಾಸಕ ಸುನಿಲ್ ಕುಮಾರ್, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮದ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ಸಾಣೂರಿನ ಕೆಂಚಬೆಟ್ಟು ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ರು. 5 ಲಕ್ಷ, ಪಡ್ಡಾಯಿಗುಡ್ಡೆ ಎಸ್‌ಸಿ ಎಸ್‌ಟಿ ಕಾಲನಿ ರಸ್ತೆ ಡಾಂಬರೀಕರಣಕ್ಕೆ ರು. 5 ಲಕ್ಷ ಅನುದಾನವನ್ನು ಶಾಸಕರ ನಿಧಿಯಲ್ಲಿ ನೀಡುವುದಾಗಿ ಘೋಷಿಸಿದರು. ಜಿ.ಪಂ. ಸದಸ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್. ಕೋಟ್ಯಾನ್, ಗ್ರಾ.ಪಂ. ಉಪಾಧ್ಯಕ್ಷೆ ರೇಖಾ ಕೋಟ್ಯಾನ್, ಸದಸ್ಯರಾದ ಯುವರಾಜ್ ಜೈನ್, ಭಾಸ್ಕರ ಆಚಾರ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಶೆಣೈ, ವಿಶ್ವನಾಥ ಬಿ. ಶೆಟ್ಟಿ, ಚಂದ್ರಹಾಸ ಪೂಜಾರಿ, ಪ್ರಸಾದ್ ಬಿ. ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.