ಉಡುಪಿ

ವಿದ್ಯುತ್ ಕಂಪನಿಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ವಿದ್ಯುತ್ ಸಮಸ್ಯೆ: ಭಂಡಾರಿ

Published On :

ಕಾಪು:  ವಿದ್ಯುತ್ ಕಂಪನಿಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ಸಮಸ್ಯೆ ತಲೆದೂರಿದೆ ಎಂದು ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದ್ದಾರೆ.
ಶನಿವಾರ ಕಟಪಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಜೆಪಿ ಉಡುಪಿ ಜಿಲ್ಲಾ ಕಾರ್ಯಕಾರಿಣಿಯ ಪ್ರಥಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಖಜಾನೆ ಖಾಲಿಯಾಗಿದ್ದು, ಯಾವ ಇಲಾಖೆಗೂ ಹಣ ಪಾವತಿ ಆಗುತ್ತಿಲ್ಲ. ಇದರಿಂದ ವಿದ್ಯುತ್ ಸಮಸ್ಯೆ ತಲೆದೋರಿದೆ. ರಾಜ್ಯ ಸರ್ಕಾರದ ಕಾರ್ಯ ವೈಖರಿಯಿಂದ ಜನ ಬೇಸತ್ತಿದ್ದಾರೆ ಎಂದು ಹೇಳಿದರು. ಬಿಜೆಪಿಯ ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಎಸ್. ಕುಂದರ್, ಉಡುಪಿ ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಮಾಜಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಾಪು ಕ್ಷೇತ್ರಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ನವೀನ್ ಶೆಟ್ಟಿ ಕುತ್ಯಾರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.