ಉಡುಪಿ

ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ

Published On :

ಉಡುಪಿ: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲಾ ಅಕ್ಷರದಾಸೋಹ ಕಟ್ಟಡವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ  ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜಿ.ಪಂ. ಸದಸ್ಯೆ ಐಡಾಗಿಬ್ಬ ಡಿ' ಸೋಜ, ತಾ.ಪಂ. ಸದಸ್ಯ ಕೃಷ್ಣ ಪೂಜಾರಿ, ಶಿರ್ವ ಗ್ರಾ.ಪಂ. ಅಧ್ಯಕ್ಷ ಹಸನಬ್ಬ ಶೇಖ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರವಿಶಂಕರ್ ರಾವ್, ಶ್ರೀ ದೇವಳದ ಅಡಳಿತ ಮಂಡಳಿ ಅಧ್ಯಕ್ಷ ಶಶಿಧರ ವಾಗ್ಲೆ, ಆಡಳಿತ ಮೊಕ್ತೇಸರ ವಿಶ್ವನಾಥ ನಾಯಕ್, ದೇವಳದ ಅಡಳಿತ ಮಂಡಳಿಯ ಎಂ. ಬಾಲಕೃಷ್ಣ ನಾಯಕ್, ಕೆ.ವಿ. ಪ್ರಭು, ಗೀತಾ ವಾಗ್ಲೆ, ಗಂಪದಬೈಲು ಜಯರಾಮ ಪ್ರಭು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮಾಧವ ಆಚಾರ್ಯ, ರಾಜಪುರ ಸಾರಸ್ವತ ಯುವ ವೃಂದದ ಅಧ್ಯಕ್ಷ ಅನಂತರಾಮ ವಾಗ್ಲೆ, ಶಿರ್ವ ಗ್ರಾ.ಪಂ. ಸದಸ್ಯ ಕೆ.ಆರ್. ಪಾಟ್ಕರ್,  ನಿವೃತ್ತ ಮುಖ್ಯ ಶಿಕ್ಷಕ ಬಿ. ಅನಂತರಾಮ ಭಟ್ ಇದ್ದರು. ಶಾಲಾ ಮುಖ್ಯ ಶಿಕ್ಷಕ ಎನ್. ರಾಧಾಕೃಷ್ಣ ಪ್ರಭು ಸ್ವಾಗತಿಸಿದರು.
 ದೇವದಾಸ ಪಾಟ್ಕರ್, ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.