ನಿಟ್ಟೆ: 29, 30ರಂದು ರಾಷ್ಟ್ರೀಯ ಸಮ್ಮೇಳನ
ಕಾರ್ಕಳ: ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯಲ್ಲಿ ಡಿ.29 ಹಾಗೂ 30ರಂದು 'ಉದಯೋನ್ಮುಖ ಭಾರತದಲ್ಲಿ ಮಾರುಕಟ್ಟೆ, ಸರ್ಕಾರ ಮತ್ತು ಸಮಾಜ' ಎಂಬ ವಿಷಯದ ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
29ರಂದು ಬೆಂಗಳೂರಿನ ಮುಂಗಡ ಪತ್ರಗಳ ಅಧ್ಯಯನ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ, ಅರ್ಥಶಾಸ್ತ್ರಜ್ಞ ಡಾ.ವಿನೋದ್ ವ್ಯಾಸುಲು ಸಮ್ಮೇಳನ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿವಿ ಕುಲಸಚಿವ ಡಾ.ಎಂ.ಎಸ್. ಮೂಡಿತ್ತಾಯ ಪ್ರಬಂಧಗಳ ಸಂಕಲನ ಬಿಡುಗಡೆಗೊಳಿಸುವರು. ನಿಟ್ಟೆ ವಿವಿ ಕುಲಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ನಂತರ ಪ್ರೊ.ಜಿ.ವಿ. ಜೋಷಿ ಅಧ್ಯಕ್ಷತೆಯಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪುಣೆಯ ಡಾ.ಟಿ.ಎಸ್. ರವಿಶಂಕರ್, ಮಣಿಪಾಲದ ಡಾ.ಆರ್. ವೇಣುಗೋಪಾಲ್, ಮಂಗಳೂರಿನ ವಿ.ಕೆ. ತಾಳಿತ್ತಾಯ, ಬೆಂಗಳೂರಿನ ಡಾ.ಎಸ್. ತಮ್ಮಯ್ಯ, ನಿಟ್ಟೆಯ ಡಾ.ಎನ್.ಎಸ್. ಶೆಟ್ಟಿ ಹಾಗೂ ಮತ್ತು ಡಾ.ವಾಣಿಶ್ರೀ ಜೋಸೆಫ್ ಸಂಪನ್ಮೂಲ ವ್ಯಕ್ತಿಗಳಾಗಿ ಮಹತ್ವದ ವಿಷಯಗಳ ಕುರಿತು ವಿಚಾರ ಮಂಡನೆ ನಡೆಸಲಿದ್ದಾರೆ.
ಎರಡು ದಿನ ನಡೆಯಲಿರುವ ವಿವಿಧ ಗೋಷ್ಠಿಗಳಲ್ಲಿ ಕರ್ನಾಟಕ, ಆಂಧ್ರ, ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ನವದೆಹಲಿ, ಪಶ್ಚಿಮ ಬಂಗಾಳ, ಕೇರಳ ಮುಂತಾದ ರಾಜ್ಯಗಳ ತಜ್ಞರು ಪ್ರಬಂಧ ಮಂಡಿಸಲಿದ್ದಾರೆ.
ಡಿ.30ರಂದು ಡಾ.ಎನ್.ಕೆ. ತಿಂಗಳಾಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಉದ್ಯಮಿ ಜಗದೀಶ ಕಿಣಿ ಪ್ರಧಾನ ಭಾಷಣ ಮಾಡಲಿದ್ದಾರೆ. ನಿಟ್ಟೆ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿಶಾಲ್ ಹೆಗ್ಡೆ ಗೌರವ ಅತಿಥಿಯಾಗಿರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

