ಕಾರ್ಕಳ: ವಾಜಪೇಯಿ ಜನ್ಮದಿನಾಚರಣೆ
ಕಾರ್ಕಳ: ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನ ಆಚರಿಸಲಾಯಿತು.
ಪಕ್ಷದ ಹಿರಿಯ ಬೋಳ ಪ್ರಭಾಕರ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ, ದೇಶ ಕಂಡ ಅತ್ಯಂತ ಪ್ರಮಾಣಿಕ ಮತ್ತು ಪ್ರಬುದ್ಧ ಪ್ರಧಾನಮಂತ್ರಿಯಾಗಿದ್ದ ವಾಜಪೇಯಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ, ಗೌರವ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.
ವಾಜಪೇಯಿ ಅವರ ಬಲಿಷ್ಠ ಭಾರತ ನಿರ್ಮಾಣದ ಕನಸುಗಳು ಸಾಕಾರಗೊಳ್ಳಬೇಕಾದರೆ ಅವರ ನಿಕಟವರ್ತಿ ಮತ್ತು ವಾಜಪೇಯಿ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡಿರುವ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಮಂತ್ರಿಯನ್ನಾಗಿಸಬೇಕಿದೆ ಎಂದು ಕರೆ ನೀಡಿದರು. ಪಕ್ಷದ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಮಾರ್ ಸ್ವಾಗತಿಸಿದರು. ಯುವಮೋರ್ಚಾ ಅಧ್ಯಕ್ಷ ನವೀನ್ ನಾಯಕ್ ವಂದಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ದೇವಾಡಿಗ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮಹಾವೀರ ಹೆಗ್ಡೆ, ಪುರಸಭೆ ಸದಸ್ಯರು, ಪಕ್ಷದ ಪ್ರಮುಖರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

