ಉಡುಪಿ

ರಕ್ತದಾನದಿಂದ ಆರೋಗ್ಯ ವೃದ್ಧಿ: ಬಲ್ಲಾಳ್

Published On :

ಉಡುಪಿ: ರಕ್ತದಾನದಿಂದ ದೇಹಾರೋಗ್ಯಕ್ಕೆ ಯಾವುದೇ ತೊಂದರೆಯಿಲ್ಲ ಹಾಗೂ ಆರೋಗ್ಯವಂತ ವ್ಯಕ್ತಿ ನಿಯಮಿತವಾಗಿ ನಿಗದಿತ ಅವಧಿಯಲ್ಲಿ ರಕ್ತದಾನ ಮಾಡಬಹುದು ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಅಂಬಲಪಾಡಿಯ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಜರುಗಿದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.  ನಗರಸಭೆ ಅಧ್ಯಕ್ಷ ಯುವರಾಜ್ ಅಧ್ಯಕ್ಷತೆ ವಹಿಸಿದ್ದರು.  ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಡಾ. ಸತೀಶ್ ಪೂಜಾರಿ, ಅಂಬಲಪಾಡಿ ಯುವಕ ಮಂಡಲ ಗೌರವಾಧ್ಯಕ್ಷ ಎಚ್. ಜಗದೀಶ್ ಕೆದ್ಲಾಯ, ಬಿಲ್ಲವ ಯುವ ವೇದಿಕೆ ಅಂಬಲಪಾಡಿ ಘಟಕದ ಅಧ್ಯಕ್ಷ ಶಿವಕುಮಾರ್, ನಿಡಂಬೂರು ವಲಯ ಬ್ರಾಹ್ಮಣ ಸಮಿತಿ ಅಧ್ಯಕ್ಷ ಕೆ. ವೆಂಕಟರಾಜ ಭಟ್ ಹಾಗೂ ಉಡುಪಿ ಜಿಲ್ಲಾಸ್ಪತ್ರೆಯ ವೈಧ್ಯಾಧಿಕಾರಿಗಳು ಇದ್ದರು.  ಯುವಕ ಮಂಡಲ ಅಧ್ಯಕ್ಷ ಪ್ರವೀಣ್ ಉಪಾಧ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಶಾಂತ್  ಅಂಬಲಪಾಡಿ ನಿರೂಪಿಸಿ ವಂದಿಸಿದರು.
ಬ್ಯಾನರ್ ಸಂಸ್ಕೃತಿ ಕಡಿವಾಣ ಅಗತ್ಯ: ದಿವಾಕರ
ಉಡುಪಿ: ಜನಪ್ರತಿನಿಧಿಗಳು ಸರ್ಕಾರದಿಂದ ತಮಗೆ ದೊರತ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಿದಾಗ, ಅವರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಹಾಕುವ ಸಂಸ್ಕೃತಿ ಇತ್ತೀಚಿನ ದಿನಗಳಲ್ಲಿ ಅಧಿಕವಾಗುತ್ತಿದೆ. ಈ ಬ್ಯಾನರ್  ಸಂಸ್ಕೃತಿಗೆ ಇತಿಶ್ರೀ ಹಾಡಬೇಕಾಗಿದೆ. ಅಭಿವೃದ್ಧಿ ಕಾಮಗಾರಿ ನಡೆಸಲೆಂದೇ ಮತದಾರ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿರುವುದರಿಂದ ಅಭಿವೃದ್ಧಿ ಮಾಡುವುದು ಜನಪ್ರತಿನಿಧಿಯಾದವರ ಕರ್ತವ್ಯ ಎಂದು ಉದ್ಯಾವರ ಜಿ.ಪಂ. ಸದಸ್ಯ ದಿವಾಕರ ಎ. ಕುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲೆವೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ರಸ್ತೆಗೆ ಜಿ.ಪಂ. ಸದಸ್ಯರ ಅನುದಾನದಿಂದ ಮಂಜೂರಾದ ರು. 3 ಲಕ್ಷ ವೆಚ್ಚದ ಕಾಂಕ್ರಿಟ್ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.  ಅಲೆವೂರು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಕೆ. ಭಟ್, ನಿಟಕಪೂರ್ವ ಅಧ್ಯಕ್ಷ ಹರೀಶ್ ಕಿಣಿ, ಮಾಜಿ ಸದಸ್ಯ ಸತೀಶ್ ಪೂಜಾರಿ, ಗುತ್ತಿಗೆದಾರ ವಿಶ್ವಪ್ರಸಾದ್ ಹೆಗ್ಡೆ, ಭಾಸ್ಕರ ಶೆಟ್ಟಿ, ಸ್ಥಳೀಯರಾದ ಪ್ರಕಾಶ್ ಅಂಚನ್ ಇದ್ದರು.
ರಾಜ್ಯ ಅಥ್ಲೆಟಿಕ್ಸ್: ಶಂಕರ ಪೂಜಾರಿಗೆ ಚಿನ್ನ
ಉಡುಪಿ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ ಎಸೋಸಿಯೇಶನ್ ವತಿಯಿಂದ ರಾಮನಗರದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದ 35 ವರ್ಷ ವಯೋವುತಿ ವಿಭಾಗದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪಡೆಯ ಶಂಕರ ಪೂಜಾರಿ ಬಿಜೂರು 200 ಮೀ. ಹಾಗೂ 400 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಅಲ್ಲದೆ, ಫೆಬ್ರುವರಿಯಲ್ಲಿ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆಯುವ 35ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಅವರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಬೋರಲಿಂಗಯ್ಯ ಎಂ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂತೋಷ್ ಕುಮಾರ್, ಉಡುಪಿ ಉಪಾಧೀಕ್ಷಕ ಡಾ. ಪ್ರಭುದೇವ ಬಿ. ಮಾನೆ, ಸಶಸ್ತ್ರ ಪೊಲೀಸ್ ಉಪನಿರೀಕ್ಷಕ ಉಮೇಶ್, ಜಿಲ್ಲಾ ನಿಸ್ತಂತು ವಿಭಾಗದ ನಿರೀಕ್ಷಕ ಎಸ್.ಸಿ. ಮೋಹನ್ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.