ಉಡುಪಿ

ಪರಮೇಶ್ವರ, ಸಿದ್ದು ಭಿನ್ನ ಹೇಳಿಕೆ

Published On :

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳಾಗಬಯಸುವವರು ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವು (ಜ.30) ಈಗಾಗಲೇ ಮುಗಿದಿದ್ದು ಇನ್ನು ಯಾರ ಅರ್ಜಿಯನ್ನೂ ಸ್ವೀಕರಿಸಲಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಕಟ್ಟುನಿಟ್ಟಾಗಿ ಹೇಳಿರುವ ಬೆನ್ನಲ್ಲೇ ಕಾಂಗ್ರೆಸ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.
ಅವರಿಬ್ಬರೂ ಶುಕ್ರವಾರ ಉಡುಪಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಪ್ರತ್ಯೇಕವಾಗಿ ಮಾಧ್ಯಮದವರೊಂದಿಗೆ ಮಾತನಾಡಿ, ಪರಸ್ಪರ ಭಿನ್ನವಾದ ಹೇಳಿಕೆಗಳನ್ನು ನೀಡಿದ್ದಾರೆ.
ಕೊನೇ ದಿನದೊಳಗೆ ಖುದ್ದು ಸಿದ್ದರಾಮಯ್ಯ ಅವರೇ ಅರ್ಜಿ ಸಲ್ಲಿಸಿಲ್ಲ. ಈ ಬಗ್ಗೆ ಕೇಳಿದಾಗ ಅದೇನೂ ದೊಡ್ಡ ಇಶ್ಯು ಅಲ್ಲಾರಿ.. ಎಂದು ಹಾರಿಕೆಯ ಉತ್ತರ ನೀಡಿದರು.
ಡಾ. ಪರಮೇಶ್ವರ್ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಅದು ಹೇಗಾಗುತ್ತೇರಿ ನಾನು ಇಲ್ಲಿ ಪಾದಯಾತ್ರೆ ಮಾಡುತ್ತಿದ್ದೇನೆ, ಅದನ್ನು ಬಿಟ್ಟು ಮಧ್ಯದಲ್ಲಿ ಹೋಗಿ ಅರ್ಜಿ ಕೊಡಕ್ಕಾಗುತ್ತಾ?  ಈ ದೇಶದಲ್ಲಿ ಕೊನೆಯ ದಿನದೊಳಗೆ ಅರ್ಜಿ ಸಲ್ಲಿಸಿಲ್ಲ ಅನ್ನೋದೇನೂ ದೊಡ್ಡ ಪ್ರಮಾದ ಅಲ್ಲ. ಇಲ್ಲಿಂದ ಹೋದ ತಕ್ಷಣ ಅರ್ಜಿ ಕೊಡ್ತಿನಿ ಬಿಡಿ... ಎಂದು ಮುಂದೆ ನಡೆದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.