ಉಡುಪಿ

ಕಾರ್ಕಳ: ಶಾಲೆಗೆ ಹೋದ ಇಬ್ಬರು ಮಕ್ಕಳು ನಾಪತ್ತೆ

Published On :

ಕಾರ್ಕಳ: ಇಲ್ಲಿನ ಕಸಬ ಗ್ರಾಮದ ಶಾಲೆಯೊಂದರಿಂದ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಕಾಣೆಯಾದವರು ಇಲ್ಲಿನ ಮಿಯಾರು ಗ್ರಾಮದ ಜೋಡುಕಟ್ಟೆಯ ನಿವಾಸಿ ಸತೀಶ್  ಎಂಬವರ ಮಗ ಮನೀಷ್ (13) ಮತ್ತು ನಿಟ್ಟೆ ಗ್ರಾಮದ ಗುಂಡ್ಯಡ್ಕ ಸಮೀಪದ ಅತ್ತೂರು ಪದವು ನಿವಾಸಿ ವಲೇರಿಯನ್ ಫೆರ್ನಾಂಡಿಸ್  ಎಂಬವರ ಮಗ ಆಸ್ಟೀನ್ ಫೆನಾಂಂಡಿಸ್ (13), ಅವರಿಬ್ಬರೂ  ಕಸಬ ಗ್ರಾಮದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ತಮ್ಮ ಮನೆಯಿಂದ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಶಾಲೆಗೆಂದು ಹೋಗಿದ್ದವರು, ಶಾಲೆಗೂ ಹೋಗದೇ ವಾಪಾಸು ಮನೆಗೂ ಬಾರದೇ ಕಾಣೆಯಾಗಿರುವುದಾಗಿದೆ. ಈ ಬಗ್ಗೆ ಲೋಕೇಶ್ ಗೌಡ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.