ಉಡುಪಿ

ಅಪಘಾತದಲ್ಲಿ ಉಡುಪಿ ವಿದ್ಯಾರ್ಥಿ ಸಾವು

Published On :

ಬೆಂಗಳೂರು: ಬೆಂಗಳೂರಿನ ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. 24 ವರ್ಷದ ಉಡುಪಿ ಮೂಲದ ವಿನಯ್ ಭಾಗವತ್ ಮೃತಪಟ್ಟವರು. ರಿಚ್‌ಮಂಡ್ ರಸ್ತೆಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದೆ.ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿನಯ್ ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದೇ ಘಟನೆಗೆ ಕಾರಣ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ವಿನಯ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಆತ್ಮಹತ್ಯೆ
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತರು ಚಂದ್ರಾವತಿ. ಅವರು ಮಾನಸಿಕ ಕಾಯಿಲೆಯಿಂದ ಬಳಲುತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೇ ಇದ್ದುದರಿಂದ, ಜೀವನದಲ್ಲಿ ಬೇಸತ್ತು ಗುರುವಾರ ಮನೆಯ ಮಾಳಿಗೆ ಮೇಲಿರುವ ಕೋಣೆಯಲ್ಲಿ ಫ್ಯಾನ್‌ಗೆ ಶಾಲಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.