ಕುಂಭಮೇಳಕ್ಕೆ ತೆರಳಿದ ಕನ್ಯಾಡಿ ಶ್ರೀ
ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ನಿತ್ಯಾನಂದ ನಗರದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಫೆ.6ರಂದು ತೆರಳಿದ್ದಾರೆ. ಉತ್ತರ ಪ್ರದೇಶದ ಪ್ರಯಾಗದಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮೇಳಕ್ಕೆ ವೇದಮೂರ್ತಿ ಲಕ್ಷ್ಮೀಪತಿ ಗೋಪಾಲಾಚಾರ್ಯ ಮತ್ತು ಶಿಷ್ಯ ವರ್ಗದವರೊಂದಿಗೆ ಹೊರಟಿರುವ ಸ್ವಾಮೀಜಿಯವರು ಫೆ.10ರ ಅಮಾವಾಸ್ಯೆಯಂದು ಕುಂಭ ಮೇಳದ ಪವಿತ್ರ ತೀರ್ಥಸ್ನಾನ ಮಾಡಲಿದ್ದಾರೆ.
ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ
ಮಲ್ಪೆ: ಉಡುಪಿಯ ಕಿದಿಯೂರು ಗ್ರಾಮದಲ್ಲಿ ವಿವಾಹಿತೆ ಗಂಡನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಾರತೀ ಅಮೀನ್ (35) ಮೃತರು. ಈಕೆಗೆ ಕರುಣಾಕರ ಕಾಂಚನ್ ಎಂಬವರೊಂದಿಗೆ 10 ವರ್ಷ ಕೆಳಗೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಅವರ ಮಧ್ಯ ಜಗಳಗಳಾಗುತ್ತಿದ್ದವು ಎನ್ನಲಾಗಿದೆ. ಗುರುವಾರ ಭಾರತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಮಳೆ
ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಸಂಜೆ ಹಠಾತ್ತಾಗಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಯಾವುದೇ ಮುನ್ಸೂಚನೆ ನೀಡದೆ ಮಳೆ ಸುರಿದಿದ್ದರಿಂದ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳು ತೊಂದರೆಪಡುವಂತಾಯಿತು. ಯಾತ್ರಾರ್ಥಿಗಳು ರಸ್ತೆಬದಿಯ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಮಳೆಯಿಂದ ರಕ್ಷಣೆ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು ಸಹಿತ ಮಳೆಯಾಗಿದೆ. ಗುತ್ತಿಗಾರು, ಪಂಜ, ಹರಿಹರ, ಏಣೆಕಲ್ಲು ಮತ್ತಿತರ ಕಡಗಳಲ್ಲೂ ಉತ್ತಮ ಮಳೆಯಾಗಿದೆ. ದಿಢೀರ್ ಆಗಿ ಮಳೆ ಸುರಿದಿದ್ದರಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

