ಯಕ್ಷಗಾನ ಮೇಳ, ಸಂಸ್ಥೆಗಳಿಗೆ ಅನುದಾನ ನೀಡಲು ಯೋಜನೆ: ಶ್ರೀನಿವಾಸ ಪೂಜಾರಿ
ಉಡುಪಿ: ರಾಮಾಯಣ ಮಹಾಭಾರತದಂತಹ ಮೌಲ್ಯಾಧರಿತ ಕಥೆಯನ್ನು ಯಕ್ಷಗಾನದ ಮೂಲಕವಾಗಿ ಪ್ರಚುರಪಡಿಸುವ ಹಾಗೂ ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಉಳಿಸಿ ಬೆಳೆಸುವ, ಆರ್ಥಿಕವಾಗಿ ಹಿಂದಿರುವ ಯಕ್ಷಗಾನ ಮೇಳಗಳಿಗೆ ಮತ್ತು ಹವ್ಯಾಸಿ ಯಕ್ಷಗಾನ ಸಂಸ್ಥೆಗಳಿಗೆ ಅನುದಾನವನ್ನು ನೀಡಲು ಧಾರ್ಮಿಕ ದತ್ತಿ ಇಲಾಖೆ ಯೋಜನೆಯನ್ನು ಹಾಕಿಕೊಳ್ಳಲಾಗುವುದು ಎಂದು ಮುಜರಾಯಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಇತ್ತೀಚೆಗೆ ಇಲ್ಲಿನ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ವಜ್ರಮಹೋತ್ಸವ ಸಭಾಭವನ ಉದ್ಘಾಟನೆಯ ಅಂಗವಾಗಿ ಗುಂಡಿಬೈಲಿನಲ್ಲಿರುವ ಕಲಾಕ್ಷೇತ್ರದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಗುಂಡ್ಮಿ ಸದಾನಂದ ಐತಳಾರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಮನೋಹರ್ ಶೆಟ್ಟಿ ಮತ್ತು ಪುರುಷೋತ್ತಮ ಶೆಟ್ಟಿ, ಯಕ್ಷಗಾನ ಹಿರಿಯ ಹವ್ಯಾಸಿ ಕಲಾವಿದ ಶ್ರೀಧರ ಹಂದೆ ಇದ್ದರು.
ಕಾರ್ಯಕ್ರಮದಲ್ಲಿ ಸಂಚಾಲಕ ಬಾಬು ಅಮೀನ್ ಸ್ವಾಗತಿಸಿದರು. ಕಾರ್ಯದರ್ಶಿ ಕೇಶವಮೂರ್ತಿ ಬೆಲ್ಪತ್ರೆ ನಿರೂಪಿಸಿ, ಜೊತೆ ಕಾರ್ಯದರ್ಶಿ ಎನ್. ಭಾಸ್ಕರ ಸುವರ್ಣ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಲಿಗ್ರಾಮ ಮಕ್ಕಳ ಮೇಳದವರಿಂದ 'ವೀರ ಬಬ್ರುವಾಹನ' ಎಂಬ ಯಕ್ಷಗಾನ ಬಯಲಾಟ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

