ಉಡುಪಿ

ಕುಂದಾಪುರ: 12 ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Published On :

ಕುಂದಾಪುರ: ನಗರಾಡಳಿತ ಸಂಸ್ಥೆಗಳ ಚುನಾವಣೆ ಮಾ. 7ರಂದು ನಡೆಯಲಿದ್ದು, ಇಲ್ಲಿನ ಸಾಲಿಗ್ರಾಮ ಪಟ್ಟಣ ಪಂಚಾಯತಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಕಳೆದ ಬಾರಿ ಬಿಜೆಪಿಗೆ ಸಮಬಲದ ಪೈಪೋಟಿ ನೀಡಿದ್ದರೂ, ಕೂದಲೆಳೆಯ ಅಂತರದಿಂದ ಅಧಿಕಾರಕ್ಕೆ ಏರುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಬಿಜೆಪಿಗಿಂತ ಮೊದಲೇ ಆಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಲ್ಲಿನ ಒಟ್ಟು 14 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೋಟ ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಶಂಕರ ಕುಂದರ್ ಗುರುವಾರ ಪ್ರಕಟಿಸಿದ್ದಾರೆ.
ಇವರಲ್ಲಿ 7 ಮಂದಿ ಗುರುವಾರವೇ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಹೆಗ್ಗಡ್ತಿ ಮಕ್ಕಿ ಮತ್ತು ಕಾರ್ತಟ್ಟು ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ಇನ್ನೊಂದೆರಡು ದಿನಗಳಲ್ಲಿ ಈ ಹೆಸರುಗಳನ್ನು ಪ್ರಕಟಿಸಲಾಗುವುದು.
ಈ ಬಾರಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಲಿದೆ ಎಂದು ಶಂಕರ ಕುಂದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.