ಉಡುಪಿ

ಭಾರತ್ ಬಂದ್: ಕುಂದಾಪುರದಲ್ಲಿ ಮಿಶ್ರಪ್ರತಿಕ್ರಿಯೆ

Published On :

ಕುಂದಾಪುರ: ಕುಂದಾಪುರ ತಾಲೂಕಿನಲ್ಲಿ ನಗರ ಪ್ರದೇಶದಲ್ಲಿ ಬಂದ್ ನಡೆದರೂ ಗ್ರಾಮೀಣ ಪ್ರದೇಶದಲ್ಲಿ ಬಂದ್‌ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಬೆಳಗ್ಗೆ ಕೆಲವು ಸಂಘಟನೆಗಳ ಕಾರ್ಯಕರ್ತರು ರಾ.ಹೆ. 66ರಲ್ಲಿ ಪ್ರತಿಭಟಿಸಲು ಮುಂದಾದರು. ಆದರೆ ಪೊಲೀಸರು ಅವರನ್ನು ಚದುರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿದರು. ಕುಂದಾಪುರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ, ಬೈಕ್ ರ್ಯಾಲಿ ಹಾಗೂ ಪ್ರತಿಭಟನಾ ಸಭೆಗಳು ನಡೆಯಿತು.
ಗುರುವಾರವೂ ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ಇಲ್ಲಿನ ಪ್ರಯಾಣಿಕರು ಪರದಾಡುವಂತಾಯಿತು. ಆಟೋರಿಕ್ಷಾಗಳ ಓಡಾಟವೂ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಇನ್ನಷ್ಟು ಪರದಾಡುವಂತಾಯಿತು. ಶಾಲಾ - ಕಾಲೇಜುಗಳು ತೆರೆದಿದ್ದವು. ಕುಂದಾಪುರ ಪೇಟೆ ಹೊರತುಪಡಿಸಿದರೆ ಹೆಮ್ಮಾಡಿ, ಗಂಗೊಳ್ಳಿ, ತಲ್ಲೂರು, ಕೋಟೇಶ್ವರ, ಕುಂಭಾಸಿ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ವ್ಯಾಪಾರ ವ್ಯವಹಾರ ಎಂದಿನಂತಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.