ಉಡುಪಿ

ಅಂಕುಶ್ ಅಧಿಕಾರ ಸ್ವೀಕಾರ

Published On :

ಉಡುಪಿ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಂಕುಶ್ ಅವರು ಶುಕ್ರವಾರ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಇದ್ದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್ ಅವರು ಹಾಸನಕ್ಕೆ ವರ್ಗಾವಣೆಗೊಂಡಿದ್ದಾರೆ.
ಮೆಹನಾಜ್‌ಗೆ ಅಭಿನಂದನೆ
ಉಡುಪಿ: ಇಲ್ಲಿನ ನಿವಾಸಿ ಶೇಕ್ ಉಮರ್ ಅವರ ಮಗಳು ಮೆಹನಾಜ್ ಎಳವೆಯಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಇತ್ತೀಚೆಗೆ ತನ್ನ ಎಂಜಿನಿಯರಿಂಗ್ ವಿಭಾಗದಲ್ಲಿ ನಿಟ್ಟೆ ಕಾಲೇಜ್‌ಗೆ ಪ್ರಥಮ ಸ್ಥಾನಿಯಾಗಿ ತೇರ್ಗಡೆಯಾಗಿದ್ದಾರೆ. ಅವರು ಈಗ ಇನ್ಫೋಸಿಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಅವಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಅವಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ನಗರದ ಉದ್ಯಮಿ ಯು. ವಿಶ್ವನಾಥ ಶೆಣೈ ಮತ್ತು ಪ್ರಭಾವತಿ ವಿ. ಶಣೈ ತಮ್ಮ ಮನೆಯಲ್ಲಿ ಆಯೋಜಿಸಿದ್ದರು. ಹಿರಿಯ ವಿದ್ವಾಂಸ, ಶಿಕ್ಷಣ ತಜ್ಞ ಪ್ರೊ.ಕೆ.ಆರ್. ಹಂದೆ ಅವರು ಮೆಹನಾಜ್ ಅವರನ್ನು ಅಭಿನಂದಿಸಿ, ಎಲ್ಲರಲ್ಲಿಯೂ ಪ್ರತಿಭೆಯಿದೆ. ಆದರೆ, ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಾಗ ಪ್ರತಿಭೆ ಬೆಳಕಿಗೆ ಬರುತ್ತದೆ ಮತ್ತು ಸಾರ್ಥಕವಾಗುತ್ತದೆ. ಅವರನ್ನು ಈ ದಾರಿಯಲ್ಲಿ ಗುರುತಿಸುವವರೂ ಬೇಕು, ಶೆಣೈ ದಂಪತಿಯ ಇಂತಹ ಸಮಾಜ ಪ್ರೀತಿಯ ಕಾರ್ಯಗಳು ಹೀಗೆ ಮುಂದುವರಿಯಲೆಂದು ಶುಭ ಹಾರೈಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಮೆಹನಾಝ್ ಅವರ ಹೆತ್ತವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.