ಅನಾಚಾರ, ಅಕ್ರಮಗಳಿಗೆ ಇಸ್ಲಾಂ ಧರ್ಮದಲ್ಲಿ ಅವಕಾಶ ಇಲ್ಲ: ಅಹ್ಮದ್ ಶರೀಫ್
ಉಡುಪಿ: ಮತ್ತೊಬ್ಬರ ಮುಖದಲ್ಲಿ ಸಂತೋಷ ಕಾಣುವ ಉದಾತ್ತ ವಿಚಾರಗಳು ಪ್ರವಾದಿ ಮಹಮ್ಮದರ ಸಂದೇಶದಲ್ಲಿ ಅಡಕವಾಗಿದೆ ಎಂದು ಮಿತ್ತೂರು ಮುದ್ರರಿಸ್ ದಅವಾ ಕಾಲೇಜಿನ ಅಹ್ಮದ್ ಶರೀಫ್ ಸಅದಿ ಅಲ್ ಕಾಮಿಲ್ ನಲ್ಲೂರು ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಶಿರ್ವ ಸಾರ್ವಜನಿಕ ಶ್ರೀಗಣೇಶೋತ್ಸವ ವೇದಿಕೆ ಸಮೀಪ ಕರ್ನಾಟಕ ರಾಜ್ಯ ಸುನ್ನಿ ಸ್ಟೂಡಂಟ್ ಫೆಡರೇಶನ್ ಕಾಪು ವಲಯ ಸಮಿತಿ ವತಿಯಿಂದ ಏರ್ಪಡಿಸಿದ 'ವಿಶ್ವಪ್ರವಾದಿ ಮಹಮ್ಮದ್ ಪೈಗಂಬರ್' ಜನ್ಮ ಮಾಸಾಚರಣೆ ಪ್ರಯುಕ್ತ ಏರ್ಪಡಿಸಿದ ಮಿಲಾದ್ ಸಂದೇಶ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಸಂದೇಶ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಿರ್ವ ಹಿಂದೂ ಪಪೂ ಕಾಲೇಜಿನ ನಿವೃತ್ತ ಪ್ರಾಂಶಪಾಲ ಎಸ್.ವಿ.ಗಣಪತಿ ಭಟ್ ಮಾತನಾಡಿದರು.
ಪತ್ರಕರ್ತ ಬಿ.ಪುಂಡಲೀಕ ಮರಾಠೆ ಮಾತನಾಡಿದರು. ಶಿರ್ವ ಸುನ್ನಿ ಜಾಮಿ ಮಸೀದಿ ಮಾಜಿ ಅಧ್ಯಕ್ಷ ಎಸ್. ಇಸ್ಮಾಯಿಲ್ ಅಬ್ದುರ್ರಹ್ಮನ್ ಅಧ್ಯಕ್ಷತೆ ವಹಿಸಿದ್ದರು.
ಎಸ್.ಎಸ್.ಎಫ್. ಕಾಪು ವಲಯಾಧ್ಯಕ್ಷ ಅಲ್ಹಾಜ್ ನಝೀರ್ ಅಹ್ಮದ್ ಸಅದಿ ಸ್ವಾಗತಿಸಿದರು. ಕೈರುಲ್ಲಾ ತೋಪನಂಗಡಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

