ಉಡುಪಿ

ಶಂಕಿತ ನಕ್ಸಲೀಯ ಆರೋಪಿ ದೋಷಮುಕ್ತ

Published On :

ಕುಂದಾಪುರ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದಡಿ ಬಂಧನಕ್ಕೆ ಒಳಗಾಗಿ, ಕುಂದಾಪುರ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 9 ಪ್ರಕರಣಗಳು ದಾಖಲಿಸಲ್ಪಟ್ಟಿದ್ದ ಶಂಕಿತ ನಕ್ಸಲೀಯ ಆರೋಪಿ ದೇವೇಂದ್ರ ಅವರು ಸೋಮವಾರ ಈ ಎಲ್ಲ ಆರೋಪಗಳಿಂದ ದೋಷಮುಕ್ತಗೊಂಡಿದ್ದಾರೆ.
 ಅವರ ಜೊತೆಗೆ ಬಂಧಿತರಾಗಿದ್ದ ವರಳೆ ಸರೋಜ ಅವರು ಮಾತ್ರ 4 ಪ್ರಕರಣಗಳಲ್ಲಿ ದೋಷಮುಕ್ತಗೊಂಡಿದ್ದು, ಇನ್ನೂ ಒಂದು ಪ್ರಕರಣದಲ್ಲಿ ಆರೋಪ ಎದುರಿಸಬೇಕಾಗಿದೆ.
 ಸೋಮವಾರ ಅವರಿಬ್ಬರನ್ನೂ ಪೊಲೀಸ್ ಬಿಗಿ ಭದ್ರತೆಯಲ್ಲಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸುದೀರ್ಘ ಕಾಲ ವಿಚಾರಣೆಯನ್ನು ಎದುರಿಸಿದ ದೇವೇಂದ್ರ ಅವರ ವಿರುದ್ಧ ಆರೋಪಗಳು ಸಾಬೀತಾಗದೆ ನ್ಯಾಯಾಲಯ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತು. ಆದರೆ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅವರ ವಿರುದ್ಧ 6 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಇನ್ನೊಬ್ಬ ಮಹಿಳಾ ಆರೋಪಿ ಸರೋಜಾ ಅವರ ಮೇಲಿನ 4  ಪ್ರಕರಣಗಳಲ್ಲಿ ನ್ಯಾಯಾಲಯವು ದೋಷಮುಕ್ತಿಗೊಳಿಸಿದೆ. ಆದರೆ ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಯಿತು. ಆದರೆ ನ್ಯಾಯಾಧೀಶರು ಮಾ.13ಕ್ಕೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಅಲ್ಲದೆ, ಅವರ ಮೇಲೆ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿಯೂ 1 ಪ್ರಕರಣ ವಿಚಾರಣೆಗೆ ಬಾಕಿ ಇದೆ.
 5 ವರ್ಷಗಳ ಹಿಂದೆ ಶಂಕರನಾರಾಯಣ ಠಾಣೆ ವ್ಯಾಪ್ತಿಯಲ್ಲಿ ಸೇತುವೆಯೊಂದನ್ನು ಧ್ವಂಸಗೊಳಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ದೇವೇಂದ್ರ ಮತ್ತು ಸರೋಜ ಅವರನ್ನು ಬಂಧಿಸಲಾಗಿತ್ತು. ಪಶ್ಚಿಮ ಘಟ್ಟದಲ್ಲಿ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿದ್ದು, ಪ್ರಚೋದನಕಾರಿ ಭಾಷಣ ಮಾಡಿದ್ದು ಇತ್ಯಾದಿ ಪ್ರಕರಣಗಳನ್ನು ಅವರ ಮೇಲೆ ಹೊರಿಸಲಾಗಿತ್ತು. ಇದಲ್ಲದೆ, ಸರೋಜ ಅವರು ಚಿಕ್ಕಮಗಳೂರು ಜಿಲ್ಲೆಯ ಬರ್ಕಣದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಸರೋಜ ಅವರು 2 ವರ್ಷಗಳ ಕಾಲ ಜೈಲಿನಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.