ಯುವತಿ ಮೃತದೇಹ ಪತ್ತೆ; ಅತ್ಯಾಚಾರ ಯತ್ನ, ಕೊಲೆ
ಬಂಟ್ವಾಳ: ನಾಗರಿಕ ಸಮಾಜವೇ ಬೆಚ್ಚಿ ಬೀಳುವ ಅಮಾನವೀಯ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದಲ್ಲಿ ನಡೆದಿದ್ದು, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಕೊಂದ ಘಟನೆಯೊಂದು ಸೋಮವಾರ ಮಧ್ಯಾಹ್ನ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಅದೇ ಪರಿಸರದ ಶಂಕಿತ ಆರೋಪಿ ಸತೀಶ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಘಟನೆ ವಿವರ: ಮಣಿಪಾಲದಲ್ಲಿರುವ ಚಿಕ್ಕಮ್ಮನ ಮನೆಯಿಂದ 22 ವರ್ಷದ ಯುವತಿ ಬಾಳ್ತಿಲದಲ್ಲಿರುವ ತನ್ನ ಮನೆಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿಭಟಿಸಿದ ಯುವತಿಯನ್ನು ಕೊಂದಿರಬಹುದೆಂದು ಶಂಕಿಸಲಾಗಿದೆ. ಮೃತದೇಹ ನಿರ್ಜನಪ್ರದೇಶದ ಕೆರೆಯಲ್ಲಿ ಪತ್ತೆಯಾಗಿದ್ದು, ರಸ್ತೆಯಿಂದ ಕೆರೆಯವರೆಗೆ ಸಂಪೂರ್ಣ ಇಳಿಜಾರಿದ್ದು ಆರೋಪಿ ಅಲ್ಲಿಯವರೆಗೆ ಎಳೆದಾಡಿಕೊಂಡು ಹೋಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದೀಗ ಪೊಲೀಸ್ ವಶದಲ್ಲಿರುವ ಸತೀಶ್ ಈ ಹಿಂದೆಯೂ ಎರಡು ಬಾರಿ ಸೌಮ್ಯಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಅಂಶವನ್ನು ಸ್ವತಃ ಯುವತಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಅನಿಲ್ ಎಸ್.ಕುಲಕರ್ಣಿ, ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಶೇಖರ್, ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕ ಮಹೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

