'ಅಂಗವಿಕಲರ ಮಾಸಾಶನಕ್ಕೆ ಕುಟುಂಬದ ಆರ್ಥಿಕ ಪರಿಸ್ಥಿತಿ ಅಡ್ಡಿಯಾಗುವುದಿಲ್ಲ'
ಉಡುಪಿ: ಇನ್ನು ಮುಂದೆ ಅಂಗವಿಕಲರು ಮಾಸಾಶನ ಪಡೆಯುವುದಕ್ಕೆ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಅಡ್ಡಿಯಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಿಸಿದರು.
ಅವರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಟುಂಬ ವಾರ್ಷಿಕ ಆದಾಯ ರು. 12,000 ಕ್ಕಿಂತ ಕಡಿಮೆ ಇರುವ ಅಂಗವಿಕಲರಿಗೆ ಮಾತ್ರ ಈಗ ಅಂಗವಿಕಲ ಮಾಸಾಶನವನ್ನು ನೀಡಲಾಗುತ್ತಿದೆ. ಆದರೆ, ಅಂಗವಿಕಲ ಮಾಸಾಶನ ಪಡೆಯಲು ಅವರ ಅಂಗವೈಕಲ್ಯದ ಪ್ರಮಾಣವೇ ಮಾನದಂಡವಾಗಬೇಕು, ಹೊರತು ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಯಲ್ಲ. ಈ ಕೌಟುಂಬಿಕ ಅರ್ಥಿಕತೆ ಮಾನದಂಡವನ್ನು ತೆಗೆದು ಹಾಕುವುದಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ವಿ. ಪೂಜಾರಿ ವಹಿಸಿದ್ದರು.
ರಾಜ್ಯ ತೆಂಗಿನ ನಾರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಶೀಲಾ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಭಾರತೀಯ ರೆಡ್ಕ್ರಾಸ್ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಅಧ್ಯಕ್ಷ ಬಸರಾಜ ಶೆಟ್ಟಿ, ಕರ್ನಾಟಕ ರಾಜ್ಯ ವಿಕಲಚೇತನರ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಜಗದೀಶ್ ಭಟ್ ಮತ್ತಿತರರು ಇದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೀಟಾ ಮಾಡ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸದಾನಂದ ನಾಯಕ್ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ನಿರಂಜನ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ವಿಕಲಚೇತನ ಮಕ್ಕಳಾದ ಚಂದ್ರ ಬಿ. ನಾಯ್ಕ್, ಶ್ರೀಮತಿ, ಕೃಷ್ಣಾ ಹಾಗೂ ಶಿಕ್ಷಕರಾದ ಜಯಾವಿಜಯ, ಕ್ಲ್ಯಾರಿಬೆಲ್ ಇವರನ್ನು ಸನ್ಮಾನಿಸಲಾಯಿತು.
ಅಲ್ಲದೆ ಸಾಧನೆ ಸಲಕರಣೆ ಮತ್ತು ಕೃತಕ ಅಂಗಾಂಗಗಳನ್ನು ವಿತರಿಸಲಾಯಿತು. ವಿಶೇಷ ಮಕ್ಕಳು ತಯಾರಿಸಿದ ವಸ್ತುಗಳ ಪ್ರದರ್ಶನವನ್ನು ಏಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

