ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣದ ಕೊರತೆ: ಹೊಳ್ಳ
ಕುಂದಾಪುರ: ಇಂದು ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿದ್ದು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಸಿಗುತ್ತಿಲ್ಲ. ಇದರಿಂದ ಯುವಜನತೆ ಭಾರತೀಯ ಸಂಸ್ಕೃತಿಯಿಂದ ವಿಮುಖಗೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ್ ಹೊಳ್ಳ ಹೇಳಿದರು.
ಕುಂದಾಪುರ ತಾಲೂಕಿನ ಕೆರಾಡಿ ವರಸಿದ್ಧಿ ವಿನಾಯಕ ಪಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಲಕ್ಷ್ಮೀ ಭಟ್ ಅವರ ಬಿಳ್ಕೋಡುಗೆ ಸಮಾರಂಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವಿಸುತ್ತಿಲ್ಲ. ಆದ್ದರಿಂದ ಶಿಕ್ಷಕರು ವಿದ್ಯೆ ಕಲಿಸುವುದರ ಜೊತೆಗೆ ಸಂಸ್ಕಾರವನ್ನು ಭೋಧಿಸಬೇಕು ಎಂದು ತಿಳಿಸಿದರು.
ಕಾಲೇಜಿನ ಸ್ಥಾಪಕ, ಸಂಚಾಲಕ ಕೆ. ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಪ್ರಭಾಕರ ಆಚಾರ್ಯ, ಮಾಜಿ ಜಿಪಂ ಸದಸ್ಯ ನಾಗಪ್ಪ ಕೊಠಾರಿ, ಸ್ಪೂರ್ತಿ ಸಂಸ್ಥೆಯ ಕೇಶವ ಕೋಟೇಶ್ವರ, ನ್ಯಾಯವಾದಿ ಕೆರಾಡಿ ಪ್ರಸನ್ನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಎಸ್. ಎಂ. ಗೋಪಾಲಕೃಷ್ಣ ಬೆಳ್ಳಾರೆ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಪ್ರತಾಪ್ಚಂದ್ರ ಶೆಟ್ಟಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

