ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಉಪ್ಪಿನಂಗಡಿ: ಇಲ್ಲಿನ ಸಮೀಪದ ಹಿರೆಬಂಡಾಡಿ ಗ್ರಾಮದ ನಂದಿನಿ ನಗರ ನಿವಾಸಿ ಹರೀಶ್ ಯಾನೆ ಎನ್.ಎ. ಹರೀಶ್ ಕಣ್ಮರೆಯಾಗಿದ್ದಾತ ಪತ್ತೆಯಾಗಿ, ನಂತರ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದಾತ ಮಂಗಳೂರಿನ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ.
ಅಣ್ಣು ಪೂಜಾರಿ ಎಂಬವರ ಮಗ ಹರೀಶ್ ವಿವಾಹಿತನಾಗಿದ್ದು, ಇಬ್ಬರು ಹೆಣ್ಣು ಮಕ್ಕಳ ತಂದೆ. ಜ. 14 ರಂದು ಇನ್ನು ಎರಡು ವರ್ಷ ನಾನು ಬರುವುದಿಲ್ಲವೆಂದು ಹೇಳಿ ಹೋದಾತನನ್ನು ಮಂಗಳೂರಿನ ರೇಲ್ವೆ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಮನೆಗೆ ಕರೆ ತರಲಾಗಿತ್ತು.
ನಂತರ ತನಗೆ ಬೆಂಗಳೂರಿನಲ್ಲಿ ಉದ್ಯೋಗ ದೊರೆತಿದೆ. ನಾನು ಅಲ್ಲಿಗೆ ಹೋಗಲೇಬೇಕೆಂದು ಪಟ್ಟು ಹಿಡಿದ ಆತನ ನಿಲುವಿಗೆ ಸ್ಪಂದಿಸಿ ಮನೆ ಮಂದಿ ಆತನನ್ನು ಬೆಂಗಳೂರಿಗೆ ಕಳುಹಿಸಿದ್ದರು. ಆದರೆ, ಬೆಂಗಳೂರಿಗೆ ರೈಲು ತಲುಪಿದ್ದಂತೆಯೇ ಮತ್ತೆ ಮಂಗಳೂರಿನತ್ತ ಪ್ರಯಾಣಿಸಿ, ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ವಸತಿ ಗೃಹದಲ್ಲಿ ರೂಮ್ ಬಾಡಿಗೆ ಪಡೆದುಕೊಂಡು ಅಲ್ಲಿ ತನ್ನ ಎರಡೂ ಕೈಗಳ ನರ ಕತ್ತರಿಸಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಕೊಠಡಿಯ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮನೆಯಿಂದ ಕಣ್ಮರೆಯಾಗುವ ವಿಚಾರಕ್ಕೂ, ಬಳಿಕ ಕೆಲಸದ ನೆಪದಲ್ಲಿ ಬೆಂಗಳೂರಿಗೆ ಹೋಗಿ ಮಂಗಳೂರಿನಲ್ಲಿ ಆತ್ಮಹತ್ಯೆಗೈದಿರುವುದಕ್ಕೂ ನಿಖರವಾದ ಕಾರಣ ತಿಳಿದುಬಂದಿಲ್ಲ. ಯಾವುದೋ ಬಲವಾದ ಕಾರಣ ಈ ಘಟನೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

