ಉಡುಪಿ

'ಕೈ' ಪಾದಯಾತ್ರೆ ಚುನಾವಣಾ ಪ್ರಚಾರ ತಂತ್ರವಲ್ಲ: ಪರಮೇಶ್ವರ್

Published On :

ಮಂಗಳೂರು: ಕರಾವಳಿಯಲ್ಲಿ ಮಂಗಳವಾರ ಆರಂಭಗೊಳ್ಳಲಿರುವ ಕಾಂಗ್ರೆಸ್‌ನ 'ಕಾಂಗ್ರೆಸ್ ನಡಿಗೆ-ಸಾಮರಸ್ಯದ ಕಡೆಗೆ' ಚುನಾವಣೆ ಸಂದರ್ಭ ಮಾಡುವ ಪ್ರಚಾರ ತಂತ್ರವಲ್ಲ. ನಾವು ಎಲ್ಲ ಜಾತಿ, ಧರ್ಮಗಳವರ ಜೊತೆ ಸೌಹಾರ್ದತೆಯಿಂದ ಇದ್ದೇವೆ ಎಂಬುದನ್ನು ಜನರಿಗೆ ತಿಳಿಸುವುದಕ್ಕೆ ನಡೆಸುತ್ತಿರುವ ಕಾರ್ಯಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.  ಸೋಮವಾರ ರಾತ್ರಿ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಸೌಹರ್ದಕ್ಕೆ ಕಾಂಗ್ರೆಸ್ ಬೆಂಬಲವಿದೆ ಎಂದು ತೋರಿಸುವುದಕ್ಕೆ ಯಾತ್ರೆ ನಡೆಸುತ್ತಿದ್ದೇವೆ. ಜೊತೆಗೆ, ಜನರಿಗೆ ಭ್ರಷ್ಟ ಬಿಜೆಪಿ ಸರ್ಕಾರ ವಿರುದ್ಧ ಜಾಗೃತಿ ಮೂಡಿಸಲಿದ್ದೇವೆ. ಇದು ಪಕ್ಷಬಲವರ್ಧನೆಗಾಗಿಯೂ ಹೌದು ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದರು.
 ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ರಮಾನಾಥ ರೈ, ಶಾಸಕ ಯು.ಟಿ.ಖಾದರ್, ಮಾಜಿ ಸಂಸದ ವಿನಯಕುಮಾರ್ ಸೊರಕೆ ಮತ್ತಿತರರು ಇದ್ದರು.
ಉಳ್ಳಾಲದಿಂದ ಯಾತ್ರೆ ಆರಂಭ: ಕಾಂಗ್ರೆಸ್‌ನ ಕೋಮು ಸೌಹಾರ್ದ ಬಿಂಬಿಸುವ ಪಾದಯಾತ್ರೆ ಮಂಗಳವಾರ ಬೆಳಗ್ಗೆ ಉಳ್ಳಾಲದಲ್ಲಿ ವಿವಿಧ ಧರ್ಮೀಯರ ಪ್ರಾರ್ಥನಾ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಆರಂಭವಾಗಲಿದೆ.  ಉಳ್ಳಾಲದಲ್ಲಿರುವ ಹಿಂದೂ, ಕ್ರೈಸ್ತ, ಮುಸ್ಲಿಂ ಮೂರೂ ಧರ್ಮಗಳ ಆರಾಧನಾ ಕೇಂದ್ರಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ರಾಣಿ ಅಬ್ಬಕ್ಕ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆ ಆರಂಭಗೊಳ್ಳಲಿದೆ.
ಬೆಳಗ್ಗೆ 8ಕ್ಕೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ಭೇಟಿ, ಬಳಿಕ ಸದಾಶಿವ ಉಳ್ಳಾಲ ಅವರ ಮನೆಯಲ್ಲಿ ಎಲ್ಲ ಧರ್ಮದ ಮುಖಂಡರ ಜತೆ ಉಪಾಹಾರ ಕೂಟ ನಡೆಯುವುದು. ಬೆಳಗ್ಗೆ 9ಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸುತ್ತಾರೆ. ನಂತರ ಉಳ್ಳಾಲದ ರಾಣಿ ಅಬ್ಬಕ್ಕ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ದೊರೆಯಲಿದೆ. ಅಲ್ಲಿಂದ ಪಾದಯಾತ್ರೆ ಮುಂದುವರಿದು ತೊಕ್ಕೊಟ್ಟಿನಲ್ಲಿ ಸಮಾವೇಶದ ಬಳಿಕ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಮಧ್ಯಾಹ್ನ ಭೋಜನ ನಡೆಯಲಿದೆ. ಸಂಜೆ ಪಣಂಬೂರಿನಲ್ಲಿ ದಿನದ ಪಾದಯಾತ್ರೆ ಅಂತ್ಯಗೊಳ್ಳುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.