ಉಡುಪಿ

ಕೊಡವೂರು ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Published On :

ಉಡುಪಿ: ಇಲ್ಲಿನ ಕೊಡವೂರಿನ ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ, ಮಹಾರಂಗ ಪೂಜೆ, ಢಕ್ಕೆಬಲಿ ಪ್ರಯುಕ್ತ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ನ ರಜತಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ರಂಜನ್ ಕಲ್ಕೂರ ಉದ್ಘಾಟಿಸಿದರು.
ಈ ಸಂದರ್ಭ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ನಯನಾ ಗಣೇಶ್ ಮಾತನಾಡಿ, ದೇವಳದ ನೂತನ ಆಡಳಿತ ಮಂಡಳಿ ಕೇವಲ 7 ತಿಂಗಳಲ್ಲೇ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಸುಮಾರು ರು. 1.50 ಕೋಟಿಗಳ ಸಮಗ್ರ ನವೀಕರಣದ ಯೋಜನೆ ಹಾಕಿಕೊಂಡಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ ಹೆಗ್ಡೆ ಆಗಮಿಸಿದ್ದರು. ಶ್ರೀ ಶಂಕರನಾರಾಯಣ ದೇವಸ್ಥಾನದ ಆಡಳಿತ ಮುಕ್ತೇಸರ ಟಿ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರಜ್ಞಾ ಕೊಡವೂರು ಪ್ರಾರ್ಥಿಸಿದರು. ದೇವಳದ ಪವಿತ್ರಪಾಣಿ ಗೋವಿಂದ ಐತಾಳ್ ಸ್ವಾಗತಿಸಿದರು. ಜನಾರ್ದನ್ ಕೊಡವೂರು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ಬಾಲ ಕಲಾವಿದರಿಂದ ಯಕ್ಷಗಾನ ಬಯಲಾಟ 'ವೀರ ಅಭಿಮನ್ಯು' ಸಂಪನ್ನಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.