ಉಡುಪಿ

ವ್ಯವಹಾರದಲ್ಲಿ ಶಿಸ್ತು ಇದ್ದಾಗ ಯಶಸ್ಸು ಸಾಧ್ಯ: ಚಂದ್ರಶೇಖರ್

Published On :

ಬ್ರಹ್ಮಾವರ: ಸ್ವಉದ್ಯೋಗವನ್ನು ಆರಂಭಿಸಿ ವ್ಯವಹರಿಸುವಾಗ ಶಿಸ್ತು ಮತ್ತು ವ್ಯವಹಾರ ಜ್ಞಾನವನ್ನು ಅಳವಡಿಸಿಕೊಂಡರೆ ಹೆಚ್ಚಿನ ಯಶಸ್ಸು ಪಡೆಯಲು ಸಾಧ್ಯ ಎಂದು ಮಣಿಪಾಲ ಸಿಂಡಿಕೇಟ್ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಎ.ಎಸ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ರುಡ್‌ಸೆಟ್ ಸಂಸ್ಥೆಯಲ್ಲಿ ನಬಾರ್ಡ್‌ನ ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾಯೋಜಕತ್ವದಲ್ಲಿ ನಡೆದ ಕಂಪ್ಯೂಟರ್ ಹಾರ್ಡ್‌ವೇರ್ ಹಾಗೂ ನೆಟ್‌ವರ್ಕಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ವಿಜಯಕುಮಾರ್ ಡಿ. ನೇರ್ಲೆಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಥೆಯ ಉಪನ್ಯಾಸಕ ಕರುಣಾಕರ ಜೈನ್ ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಬಸವರಾಜ್  ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
45 ದಿನಗಳ ಕಾಲ ನಡೆದ ಈ ತರಬೇತಿಯಲ್ಲಿ ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.