ಉಡುಪಿ

ಕುಡಿಯುವ ನೀರಿನ ವ್ಯವಸ್ಥೆ ಉದ್ಘಾಟನೆ

Published On :

ಉಡುಪಿ: ಬೆಳ್ಳೆ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದ್ರಾಳಿ ಘಟಕದ ಲಯನ್ಸ್ ಕ್ಲಬ್ ದಾನವಾಗಿ ನೀಡಿರುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ರೆ.ಫಾ. ಜೋಸ್ವಿ ಫೆರ್ನಾಂಡಿಸ್ ಇತ್ತೀಚೆಗೆ ಉದ್ಘಾಟಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೇಮ್ ಕುಮಾರ್, ಕಾರ್ಯದರ್ಶಿ ಚಂದ್ರಶೇಖರ್ ರಾವ್, ಜಿಲ್ಲಾ ಮಾಜಿ ಗವರ್ನರ್ ಜಯಕರ್ ಶೆಟ್ಟಿ ಇಂದ್ರಾಳಿ, ನಿವೃತ್ತ ಪ್ರಾಚಾರ್ಯ ಪಿ. ದಯಾನಂದ ಕಾಮತ್ ಇದ್ದರು. ಮುಖ್ಯ ಶಿಕ್ಷಕ ಸಿಲ್ವೆಸ್ಟರ್ ಮತಾಯಸ್ ಸ್ವಾಗತಿಸಿದರು. ನರಸಿಂಹ ನಾಯಕ್ ನಿರ್ವಹಿಸಿದರು.

ಗ್ರಾಮಸ್ಥರ, ಜನಪ್ರತಿನಿಧಿಗಳ ಸಭೆ
ಉಡುಪಿ: ಶಿರ್ವದ ಕೆದಿಂಜೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಬೆಳ್ಮಣ್ ರೋಟರಿ ಕ್ಲಬ್ ವತಿಯಿಂದ ದತ್ತು ಸ್ವೀಕರಿಸುವ ಬಗ್ಗೆ ಪೂರ್ವಭಾವಿಯಾಗಿ ಗ್ರಾಮಸ್ಥರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಭೆಯು ಶನಿವಾರ ಶ್ರೀ ವಿದ್ಯಾದಾಯಿನಿ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಜರುಗಿತು.  
ರೋಟರಿ ಅಧ್ಯಕ್ಷ ಸೂರ್ಯಕಾಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಬಿ. ಪುಂಡಲೀಕ ಮರಾಠೆ ಯೋಜನೆಗಳ ಅನುಷ್ಠಾನ, ಜನಪ್ರತಿನಿಧಿಗಳ ಹಾಗೂ ಗ್ರಾಮಸ್ಥರ ಪಾತ್ರ, ರೋಟರಿ ಸಂಸ್ಥೆಯ ಸಹಭಾಗಿತ್ವದ ಬಗ್ಗೆ ಮಾಹಿತಿ ನೀಡಿದರು.
ಹಿಂದೂ ರುದ್ರಭೂಮಿ, ಶೌಚಾಲಯಗಳು, ಸಂಪರ್ಕ ರಸ್ತೆ, ಮಂಜರಪಲ್ಕೆ ಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ, ಬಾಲವನ, ಕುಡಿಯುವ ನೀರು, ದಾರಿದೀಪ ವ್ಯವಸ್ಥೆ, ಗ್ರಾಮಸ್ಥರ ಆರೋಗ್ಯ ತಪಾಸಣೆ, ಮಕ್ಕಳ ಶಿಕ್ಷಣ, ಗ್ರಾಮನೈರ್ಮಲ್ಯ ಇತ್ಯಾದಿಗಳ ಬಗ್ಗೆ ಗಮನ ಸೆಳೆಯಲಾಯಿತು.
ಕಾರ್ಕಳ ತಾ.ಪಂ. ಸದಸ್ಯ ಹಾಗೂ ನಿಕಟಪೂರ್ವ ಅಧ್ಯಕ್ಷ ಜಯರಾಮ ಸಾಲಿಯಾನ್, ಬೋಳ ಗ್ರಾ.ಪಂ. ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯ ಸುಧಾಕರ ಸಾಲಿಯಾನ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸುರೇಶ ಕಾಮತ್, ಶಾಲಾ ಮುಖ್ಯ ಶಿಕ್ಷಕ ಸುಧಾಕರ ರಾವ್, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅವಿನಾಶ್ ಮಲ್ಲಿ, ರೋಟರಿ ಸಮುದಾಯ ದಳದ ಅಧ್ಯಕ್ಷ ಸುಕೇಶ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ ಪೂಜಾರಿ ಇದ್ದರು. ರೋಟರಿ ಕಾರ್ಯದರ್ಶಿ ವಿಘ್ನೇಶ್ ಶೆಣೈ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.