'ಮಾದರಿ ಜಿಲ್ಲಾಸ್ಪತ್ರೆ'ಗೆ ಯೋಜನೆ
ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯನ್ನಾಗಿ ರೂಪಿಸುವ ಯೋಜನೆ ಇದ್ದು, ತಕ್ಷಣ ತಜ್ಞರನ್ನು ಸಂಪರ್ಕಿಸಿ ಚರ್ಚೆ ನಡೆಸಲಾಗುವುದು ಎಂದು ಶಾಸಕ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಭಾನುವಾರ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ವತಿಯಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಎ.ಆರ್.ಟಿ. ಪ್ಲಸ್ ಸೆಂಟರ್ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ನಿಮ್ಹಾನ್ಸ್ ಮತ್ತು ಜಯದೇವ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೃದ್ರೋಗ ಹಾಗೂ ಇನ್ನಿತರ ಶುಶ್ರೂಷೆ ಚಿಕಿತ್ಸಾ ಶಾಖೆಗಳನ್ನು ತೆರೆಯಲು ಚಿಂತನೆ ನಡೆಯುತ್ತಿದೆ.
ನಬಾರ್ಡ್ ಯೋಜನೆಯಡಿ ಉಡುಪಿಯ ಮೆಟರ್ನಿಟಿ ಆಸ್ಪತ್ರೆಯಲ್ಲಿ 100 ಬೆಡ್‌ನ ಕಟ್ಟಡ ನಿರ್ಮಾಣಕ್ಕೆ ರು. 13.6 ಕೋಟಿ ಹಣ ಮಂಜೂರಾಗಿದ್ದು, ಅದರ ಕೆಲಸ ಕಾರ್ಯಗಳನ್ನು ಸದ್ಯದಲ್ಲೇ ಕೈಗೊಳ್ಳಲಾಗುವುದು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾದ ಎ.ಆರ್.ಟಿ ಪ್ಲಸ್ ಸೆಂಟರಿಗೆ ಬೇಕಾಗುವಂತ ಚಿಕಿತ್ಸಾ ಉಪಕರಣಗಳಿಗೆ ಶಾಸಕರ ನಿಧಿಯಿಂದ ರು. 3.75 ಲಕ್ಷ ನೀಡುವುದಾಗಿ ತಿಳಿಸಿದರು.
ಪ್ರತ್ಯೇಕ ವಾರ್ಡ್‌ಗಳ ಆರಂಭ: ಜಿಲ್ಲಾಧಿಕಾರಿ ಎಂ.ಟಿ. ರೇಜು ಮಾತನಾಡಿ, ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ವೃದ್ಧರಿಗೆ, ಚಿಕ್ಕ ಮಕ್ಕಳಿಗೆ ಮತ್ತು ಸುಟ್ಟ ಗಾಯ ಹೊಂದಿದ ರೋಗಿಗಳಿಗೆ ಪ್ರತ್ಯೇಕ ವಾರ್ಡ್‌ಗಳನ್ನು ಶೀಘ್ರ ಪ್ರಾರಂಭಿಸಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ಏಡ್ಸ್ ರೋಗಿಗಳಿಗೆ ಒಳ್ಳೆಯ ಚಿಕಿತ್ಸೆಯನ್ನು ನೀಡುವ ವ್ಯವಸ್ಥೆಯಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ. ಶಂಕರ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್, ಜಿಲ್ಲಾ ಆಸ್ಪತ್ರೆ ಎಂದರೆ ಮೂಗುಮುರಿಯುವವರ ಸಂಖ್ಯೆ ಜಾಸ್ತಿಯಾಗಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯವಿದ್ದ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ರೋಗಿಗಳು ಬರುವ ಹಾಗೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಸಭೆ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ಜಿಲ್ಲಾ ಸರ್ಜನ್ ಡಾ. ಆನಂದ ನಾಯ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಜಿಲ್ಲಾ ಆಸ್ಪತ್ರೆ ಉಸ್ತುವಾರಿ ಸಮಿತಿ ಅಧ್ಯಕ್ಷ ಧರ್ಮೇಂದ್ರ ನಾಯಕ್ ಇದ್ದರು.
ಜಿ. ಶಂಕರ ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷ ಜಿ. ಶಂಕರ್ ಸ್ವಾಗತಿಸಿ, ಸಜನಿ ನಿರೂಪಿಸಿದರು. ಈ ಸಂದರ್ಭ ಎ.ಆರ್.ಟಿ ಪ್ಲಸ್ ಸೆಂಟರ್ ಕಟ್ಟಡವನ್ನು ಜಿ. ಶಂಕರ್ ಅವರು ಜಿಲ್ಲಾಧಿಕಾರಿಗೆ ಹಸ್ತಾಂತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

