'ಯಕ್ಷಗಾನ ಸಾಂಸ್ಕೃತಿಕ, ಬೌದ್ಧಿಕ ಪರಂಪರೆಯ ಸಂಕೇತ'
ಬ್ರಹ್ಮಾವರ: ಯಕ್ಷಗಾನ ಕರಾವಳಿಯ ಗಂಡು ಕಲೆ. ಇದು ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯ ಸಂಕೇತ. ಇಂದು ಯಕ್ಷಗಾನ ಕಲೆಯತ್ತ ಮಕ್ಕಳ ಆಸಕ್ತರಾಗಿ ಅದನ್ನು ಸ್ವೀಕರಿಸುತ್ತಿದ್ದಾರೆ. ಇಂತಹ ಕಾರ್ಯಕ್ರಮದ ಆಯೋಜನೆಯ ಮೂಲಕ ಪ್ರತಿಭೆಗಳ ಅನ್ವೇಷಣೆ ಮತ್ತು ಅದನ್ನು ಹೊರತರಲು ಸಾಧ್ಯ ಎಂದು ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಯಕ್ಷಗಾನ ಕಲಾವಿದ ಸುಜಯೀಂದ್ರ ಹಂದೆ ಹೇಳಿದ್ದಾರೆ.
ಶನಿವಾರ ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್, ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯ ವಿದ್ಯಾರ್ಥಿಗಳಿಂದ “^ÚOÚÃÈÚãÀÔÚ’ ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪಿ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟತಟ್ಟು ಗ್ರಾ.ಪಂ. ಪೂರ್ವಾಧ್ಯಕ್ಷೆ ವಿಶ್ವ ಪ್ರಕಾಶಿನಿ ಹಂದೆ, ಕೋಟತಟ್ಟು ಗ್ರಾ.ಪಂ. ಸದಸ್ಯ ಪ್ರಭಾಕರ ಕಾಂಚನ್, ಹಂಗಾರಕಟ್ಟೆ ಸಾಸ್ತಾನ ರೋಟರಿ ಅಧ್ಯಕ್ಷ ಚಂದ್ರ ಶೇಖರ್ ಹೊಳ್ಳ, ಹಂಗಾರಕಟ್ಟೆ ಸಾಸ್ತಾನ ರೋಟರಿ ಮಾಜಿ ಅಧ್ಯಕ್ಷ ಚಂದ್ರ ನ್ಶಾರಿ, ಜೇಸಿಐ ಕಲ್ಯಾಣಪುರ ಅಧ್ಯಕ್ಷ ಮಿತ್ರಕುಮಾರ್ ಮತ್ತು ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆ ಮುಖ್ಯೋಪಧ್ಯಾಯ ಚಂದ್ರ ನಾಯ್ಕ್ ಇದ್ದರು.
ಶಿಕ್ಷಕ ನರೇಂದ್ರ ಕುಮಾರ್ ಕೋಟ ನಿರೂಪಿಸಿದರು. ಸತೀಶ್ ವಡ್ಡರ್ಸೆ ವಂದಿಸಿದರು. ನಂತರ ಗಣಪಯ್ಯ ಚಡಗ ನಿರ್ದೇಶನದಲ್ಲಿ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯ ವಿದ್ಯಾರ್ಥಿಗಳಿಂದ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

