ಚಡಗ ಪ್ರಶಸ್ತಿಗೆ ಕಾದಂಬರಿ ಆಹ್ವಾನ
ಉಡುಪಿ: ಕೋಟೇಶ್ವರ ಎನ್‌ಆರ್‌ಎಎಂಎಚ್ ಪ್ರಕಾಶನ ಕೊಡಮಾಡುವ 2013ನೇ ಸಾಲಿನ ದಿ. ಪಾಂಡೇಶ್ವರ ಸೂರ್ಯನಾರಾಯಣ ಚಡಗ ಪ್ರಶಸ್ತಿಗಾಗಿ 2012ರಲ್ಲಿ ಪ್ರಥಮ ಆವೃತ್ತಿಯಾಗಿ ಹೊರಬಂದ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾ ಹಂದರವನ್ನು ಒಳಗೊಂಡಿರಬೇಕು, ಸ್ವಂತ ರಚನೆಯಾಗಿರಬೇಕು. ಪ್ರಶಸ್ತಿಯು ರು. 10 ಸಾವಿರ ನಗದು, ಶಾಲು, ಸ್ಮರಣಿಕೆಗಳನ್ನು ಒಳಗೊಂಡಿದೆ. ಲೇಖಕರು ಕಾದಂಬರಿಯ 4 ಪ್ರತಿಗಳನ್ನು ಆ. 30ರೊಳಗೆ- ಕೆ. ಶಾರದಾ ಭಟ್, ಸಂಚಾಲಕಿ, ಪ್ರಶಸ್ತಿ ಸಮಿತಿ, 58, ಶಾಂತಾನಂದ ರೆಸಿಡೆನ್ಸಿ, ಮಿಶನ್ ಆಸ್ಪತ್ರೆ ರಸ್ತೆ, ಉಡುಪಿ - 576101 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9449233462 ಅಥವಾ 0820- 2535462 ಸಂಪರ್ಕಿಸಬಹುದು ಎಂದು ಸಂಚಾಲಕಿ ಕೆ. ಶಾರದಾ ಭಟ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

