ಉಡುಪಿ

ಮಾಹಿತಿ ಹಕ್ಕು: ಉಡುಪಿ ರಾಜ್ಯದಲ್ಲೇ ಪ್ರಥಮ

Published On :

ಉಡುಪಿ: ಮಾಹಿತಿ ಹಕ್ಕಿನನ್ವಯ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಯೋಜನೆಯು ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಜಾರಿಗೆ ಬಂದಿದ್ದು, ಈ ಮೇ ತಿಂಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವ ಸೊರಕೆ ಅವರು ಶನಿವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂತಸ ವ್ಯಕ್ತಪಡಿಸಿದರು. ಈ ಬಗ್ಗೆ 'ಕನ್ನಡಪ್ರಭ'ಕ್ಕೆ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ಸಲ್ಲಿಸಲಾದ ಅರ್ಜಿಗಳ ವಿಲೇವಾರಿಯ ಆಧಾರದಲ್ಲಿ ಈ ಸ್ಥಾನ ದೊರೆಯುತ್ತಿದೆ. ಈ ಯೋಜನೆ ಜಾರಿಗೆ ಬಂದ ನಂತರ ಉಡುಪಿ ಜಿಲ್ಲೆ ಮೊದಲ 5 ಸ್ಥಾನಗಳಲ್ಲಿದೆ. ಅನೇಕ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಗಳಿಸಿದೆ. ಫೆಬ್ರವರಿ ತಿಂಗಳಲ್ಲಿ ಪ್ರಥಮ, ಏಪ್ರಿಲ್ ತಿಂಗಳಲ್ಲಿ 2ನೇ ಸ್ಥಾನದಲ್ಲಿತ್ತು. ಮೇ ತಿಂಗಳಲ್ಲಿ ಮತ್ತೆ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.