ಉಡುಪಿ

ಎಸ್‌ಎಸ್‌ಎಲ್‌ಸಿ; ಜಿಲ್ಲೆಗೆ ದ್ವಿತೀಯ ಸ್ಥಾನಿ ತೃಪ್ತಿಗೆ ಸನ್ಮಾನ

Published On :

ಉಡುಪಿ: ವಿದ್ಯೆಯ ಜತೆಗೆ ವಿನಯವೂ ಸೇರಿದಾಗ ಜೀವನದಲ್ಲಿ ಯಶಸ್ಸನ್ನೂ ಸಾಧಿಸಬಹುದು. ಶಾಲಾ ಶಿಕ್ಷಕರ ಶ್ರಮ, ವಿದ್ಯಾರ್ಥಿಗಳ ಸತತ ಪರಿಶ್ರಮ ಹಾಗೂ ಪೋಷಕರ ಸಕಾಲಿಕ ಮಾರ್ಗದರ್ಶನದಲ್ಲಿ ಈ ವಿದ್ಯಾಸಂಸ್ಥೆ ಹಲವು ವರ್ಷಗಳಿಂದ ಉತ್ತಮ ಫಲಿಂತಾಶದ ಸಾಧನೆ ಮಾಡಿದೆ ಎಂದು ಸಂತ ಜೋಸೆಫ್ ಚರ್ಚಿನ ಧರ್ಮಗುರುಗಳು ಹಾಗೂ ಶಾಲಾ ಸಂಚಾಲಕ ರೆ.ಫಾ. ಲಾರೆನ್ಸ್ ಡಿಸೋಜ ತಿಳಿಸಿದರು.
ಅವರು ಇಲ್ಲಿನ ಸಂತ ಜೋಸೆಫ್ ಶಾಲಾ ಸಭಾಂಗಣದಲ್ಲಿ ಇತ್ತೀಚಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ 2012ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲಾ ವಿಭಾಗದಲ್ಲಿ ಕಾರ್ಕಳ ತಾಲೂಕಿನಲ್ಲಿ ಪ್ರಥಮ ಸ್ಥಾನ ಹಾಗೂ ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವೀತಿಯ ಸ್ಥಾನಗಳಿಸಿದ ಸಂತ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿನಿ ತೃಪ್ತಿ ಕೆ. ಶೆಟ್ಟಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮುಕುಂದ ಭಟ್ ಆದರ್ಶ ವಿದ್ಯಾರ್ಥಿಯ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷೆ ಗ್ರೆಗೋರಿ ಮಿನೇಜಸ್ ಶುಭಾಶಂಸನೆಗೈದರು. ಶಾಲಾ ಮುಖ್ಯ ಶಿಕ್ಷಕಿ ರೆನಿಲ್ಡಾ ಪಿರೇರಾ ಸ್ವಾಗತಿಸಿದರು. ಅನಿತಾ ಕಮಾಲಿನಿ ನಿರೂಪಿಸಿದರು. ಶಿಕ್ಷಕ ಚಂದ್ರಶೇರ್ ವಂದಿಸಿದರು.
ಈ ಸಂದರ್ಭದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪೃಥ್ವಿ ಪೂಜಾರಿ, ದೀಕ್ಷಾ ಶೆಟ್ಟಿ, ವೈಷ್ಣವಿ ಜೋಗಿ, ಸುಮಲತಾ ಇವರನ್ನು ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.