ಅತಿಥಿ ಉಪನ್ಯಾಸಕರಿಂದ ರಾಜ್ಯಾದ್ಯಂತ ಹೋರಾಟ ಎಚ್ಚರಿಕೆ
ಕುಂದಾಪುರ: ಸರ್ಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಪದವಿ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಅತಿಥಿ ಉಪನ್ಯಾಸಕರ ಸಂಘ ಎಚ್ಚರಿಕೆ ನೀಡಿದೆ.
ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ನಿಯೋಗವು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಬೇಟಿ ಮಾಡಿತ್ತು.
ಈ ಸಂದರ್ಭ, ಉಪನ್ಯಾಸಕರ ಬೇಡಿಕೆಗಳಾದ ಸೇವಾಭದ್ರತೆ, ಒಮ್ಮೆ ನೇಮಕಗೊಂಡ ಅತಿಥಿ ಉಪನ್ಯಾಸಕರಿಗೆ ವರ್ಷಂಪ್ರತಿ ನಡೆಸುವ ಸಂದರ್ಶನ ಕೈ ಬಿಡುವುದು, ತಿಂಗಳ ವೇತನ ಪಾವತಿ, ಹೊರ ರಾಜ್ಯದಲ್ಲಿರುವಂತೆ ರು. 25 ಸಾವಿರ ವೇತನ ನಿಗದಿ ಮಾಡುವುದು, ವರ್ಷಪೂರ್ತಿ ದುಡಿಸಿಕೊಂಡು ಕೇವಲ 9 ತಿಂಗಳ ವೇತನ ನೀಡುವ ಬದಲು 12 ತಿಂಗಳವರೆಗೆ ವಿಸ್ತರಿಸಿ ಸೇವೆಯನ್ನು ಅರ್ಹತೆಯ ಮೇರೆಗೆ ಖಾಯಂಗೊಳಿಸುವಂತೆ ಸಚಿವರ ಗಮನಕ್ಕೆ ತರಲಾಯಿತು.
ನೂತನ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಅತಿಥಿ ಉಪನ್ಯಾಸಕರ ಬಾಕಿ ಇರುವ ವೇತನ ಬಿಡುಗಡೆ ಬಗ್ಗೆ ಕ್ರಮ ಕೈಗೊಂಡಿದ್ದಾರೆ ಬಿಟ್ಟರೆ ಪ್ರಸಕ್ತ ಸಾಲಿನ ನ್ಯಾಯಯುತ ಬೇಡಿಕೆಯ ಬಗ್ಗೆ ಸ್ಪಂದಿಸದೇ ಇರುವುದರಿಂದ ಬೇಡಿಕೆ ಈಡೇರುವ ತನಕ ಹೋರಾಟದ ದಾರಿ ಹಿಡಿಯ ಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ವಕ್ವಾಡಿ ರಂಜಿತ್ ಕುಮಾರ್ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

