ಉಡುಪಿ

ಮೀನುಗಾರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published On :

ಉಡುಪಿ: ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ವತಿಯಿಂದ ಮಹಿಳಾ ಮೀನುಗಾರರ ಪ್ರತಿಭಾವಂತ ಮಕ್ಕಳಿಗೆ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ವಿದ್ಯಾರ್ಥಿಗಳು 2013ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 80, ಪದವಿ ಪರೀಕ್ಷೆಯಲ್ಲಿ ಶೇ. 70 ಅಂಕ ಗಳಿಸಿರಬೇಕು ಹಾಗೂ ವಿವಿಧ ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ಅತ್ಯಧಿಕ ಅಂಕ ಗಳಿಸಿರಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 2521431 ಅಥವಾ 2525205ನ್ನು ಸಂಪರ್ಕಿಸಬಹುದು.  ಭರ್ತಿ ಮಾಡಿದ ಅರ್ಜಿಯನ್ನು ಅಂಕಪತ್ರದ ನಕಲು ಪ್ರತಿ ಹಾಗೂ ಜಾತಿ ಪ್ರಮಾಣಪತ್ರದೊಂದಿಗೆ ಜು.31ರೊಳಗೆ ಸಲ್ಲಿಸುವಂತೆ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನೋಟ್ ಪುಸ್ತಕ ವಿತರಣೆ
ಹಿರಿಯಡ್ಕ; ಇಲ್ಲಿನ ಅಂಜಾರು ಹಿ.ಪ್ರಾ. ಶಾಲೆ ಪಡುಅಂಜಾರು ಶಾಲೆಯಲ್ಲಿ ಉನ್ನತಿ ಗೆಳೆಯರ ಬಳಗದ ವತಿಯಿಂದ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಉಡುಪಿ ತಾಪಂ ಸದಸ್ಯ ಸತ್ಯಾನಂದ ನಾಯಕ್, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯು ಅಳಿವಿನಂಚಿನಲ್ಲಿರುವುದು ಬೇಸರದ ಸಂಗತಿ. ಅವುಗಳನ್ನು ಉಳಿಸಿಕೊಳ್ಳಬೇಕಾದರೆ ರಾಜ್ಯ ಮಾತೃಭಾಷೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.  ಅತಿಥಿಗಳಾಗಿ ಸ್ಥಳೀಯರಾದ ಸೀತಾರಾಮ ಆಚಾರ್ಯ, ಶಾಲಾ ಶಿಕ್ಷಕಿ ಚಂಚಲಾಕ್ಷಿ, ಉನ್ನತಿ ಗೆಳೆಯರ ಬಳಗದ ಸದಸ್ಯರಾದ ಸುಂದರ ಪೂಜಾರಿ, ಹರೀಶ್ ಶೆಟ್ಟಿ, ಪ್ರಕಾಶ್ ಪುತ್ರನ್, ವಿಕ್ರಮ್ ಹಾಗೂ ಶಾಲಾ ಶಿಕ್ಷಕಿಯರು ಹಾಗೂ ಊರಿನವರು ಉಪಸ್ಥಿತರಿದ್ದರು. ಉನ್ನತಿ ಗೆಳೆಯರ ಬಳಗದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಅಂಜಾರು ಸ್ವಾಗತಿಸಿದರು. ಕಾರ್ಯದರ್ಶಿ ರಕ್ಷಿತ್ ಅಂಜಾರು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.