ನರೇಗಾ ಬಳಸಿ 'ಸ್ವಚ್ಛ ಮನೆ, ಸಮೃದ್ಧ ಗ್ರಾಮ ನಿರ್ಮಾಣ'ಕ್ಕೆ ಸಂಘ ಸಂಕಲ್ಪ
ಉಡುಪಿ: ದ.ಕ. ಜಿಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಾಧನೆಗಳು ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೊಸ ಪ್ರೇರಣೆಯೊಂದನ್ನು ನೀಡಿದೆ. ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯೆಯರ ಸುಗ್ರಾಮ ಸಂಘವು 'ಸ್ವಚ್ಛ ಮನೆ, ಸಮೃದ್ಧ ಗ್ರಾಮ ನಿರ್ಮಾಣ'ದ ಸಂಕಲ್ಪ ಕೈಗೊಂಡಿದೆ.
ಇದಕ್ಕೆ ಕೇಂದ್ರ ಸರ್ಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಉಡುಪಿ ತಾಲೂಕು ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ವಿಶೇಷ ಮಾಹಿತಿ ಪ್ರೇರಣಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಒಂಬುಡ್ಸ್ಮನ್ ಎನ್. ಶೀನ ಶೆಟ್ಟಿ ಭಾಗವಹಿಸಿ, ದ.ಕ. ಜಿಲ್ಲಾ ಸುಗ್ರಾಮ ಸದಸ್ಯೆಯರ ಯಶೋಗಾಥೆಗಳ ಉದಾಹರಣೆ ನೀಡಿದರು.
ನರೇಗಾ ಮೂಲಕ ನೆಲ- ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡುವ, ಅಂಗನವಾಡಿ- ಶಾಲೆ ಆವರಣಗಳಲ್ಲಿ ಪೌಷ್ಟಿಕ ಆಹಾರ ತೋಟಗಳನ್ನು ನಿರ್ಮಿಸುವ, ರಸ್ತೆ ಬದಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಹಣ್ಣಿನ ಗಿಡಗಳನ್ನು ನೆಡುವ, ಇಂಗು ಗುಂಡಿ ನಿರ್ಮಿಸುವ, ಎಲ್ಲ ಅರ್ಹ ಫಲಾನುಭವಿಗಳ ಜಮೀನು ಅಭಿವೃದ್ಧಿಗೊಳಿಸುವ, ತೋಟಗಾರಿಕೆ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಗ್ರಾಮ ಸಂಘದ ಅಧ್ಯಕ್ಷೆ ಆಶಾ ಶೆಟ್ಟಿ ನೇತೃತ್ವದಲ್ಲಿ ಉಡುಪಿ ತಾಲೂಕು ಸುಗ್ರಾಮ ಸದಸ್ಯೆಯರು ತಾಲೂಕಿನಲ್ಲಿಯೂ ಸ್ವಚ್ಛ ಮನೆ, ಸಮೃದ್ಧ ಗ್ರಾಮ ನಿರ್ಮಾಣದ ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಾಣೇಶ್ ರಾವ್, ಈ ಸಂಕಲ್ಪಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿ ಸದಾನಂದ ಅವರು ನರೇಗಾ ಯೋಜನೆಯಲ್ಲಿ ಪೌಷ್ಟಿಕ ಆಹಾರ ತೋಟಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ಸಲಹೆ ಮಾಡಿದರು. ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಸಂಯೋಜಕಿ ರಮಾದೇವಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥಯ್ಯ ಇದ್ದರು.
ಈ ವಿಶೇಷ ಪ್ರೇರಣಾ ಕಾರ್ಯಕ್ರಮದಲ್ಲಿ ತಾಲೂಕಿನ 17 ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಸದಸ್ಯರಿಗೆ ಕಾನೂನು ಮಾಹಿತಿ ಪುಸ್ತಕಗಳನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

